ಕುರುಕ್ಷೇತ್ರ ಅಖಾಡದಲ್ಲಿ ಕುರುಡು ಕಾಂಚಾಣ, ಮರದ ಬುಡದಲ್ಲಿತ್ತು ಗರಿ ಗರಿ ನೋಟು..!

ಮೇ 10  ರಂದು ನಡೆಯುವ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಮತದಾನಕ್ಕೆ ಇನ್ನು ಒಂದು ದಿನ ಬಾಕಿ ಇರುವಾಗಲೇ ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿರುವ ಘಟನೆ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಚಿಕ್ಕಲಸಂದ್ರದಲ್ಲಿ ನಡೆದಿದೆ.

Share this Video
  • FB
  • Linkdin
  • Whatsapp

ಮೇ 10 ರಂದು ನಡೆಯುವ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಬಹಿರಂಗ ಪ್ರಚಾರ ಸೋಮವಾರ ಸಂಜೆಯೇ ಮುಗಿದಿದೆ.ಮತದಾನಕ್ಕೆ ಇನ್ನು ಒಂದು ದಿನ ಬಾಕಿ ಇರುವಾಗಲೇ ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿರುವ ಘಟನೆ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಚಿಕ್ಕಲಸಂದ್ರದಲ್ಲಿ ನಡೆದಿದೆ. ಘಟನೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮುಖಂಡೆ ಶೋಭಾ ಗೌಡ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ವಿಚಕ್ಷಣ ದಳ ಪರಿಶೀಲನೆ ನಡೆಸಿದ್ದು, ರಸ್ತೆ ಅಕ್ಕಪಕ್ಕದಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮರದ ಬುಡದಲ್ಲಿ ಹಣ ಪತ್ತೆಯಾಗಿದೆ, ಅದಲ್ಲದೆ ಬ್ಯಾಗ್‌ನಲ್ಲಿ ಮೂರುಲಕ್ಷಕ್ಕು ಅಧಿಕ ಹಣ ಸಿಕ್ಕಿದ್ದು ಕೈ ಕಾರ್ಯಕರ್ತರನ್ನು ವಶಕ್ಕೆ ಪಡೆದು ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

Related Video