ಸಿಎಂ ಬೊಮ್ಮಾಯಿ ವಿರುದ್ಧ ವಿನಯ್ ಕುಲಕರ್ಣಿ ಸ್ಪರ್ಧೆ, ಕರ್ನಾಟಕ ಕುರುಕ್ಷೇತ್ರಕ್ಕೆ ಸಾಕ್ಷಿಯಾಗಲಿದೆ ಶಿಗ್ಗಾವಿ...
ಚುನಾಣೆಗಾಗಿ ಈಗಾಗಲೇ ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದು, ಶಿಗ್ಗಾವಿಯಲ್ಲಿ ಪಂಚಮಸಾಲಿಯ ಪ್ರಭಾವಿ ನಾಯಕ ವಿನಯ್ ಕುಲಕರ್ಣಿಯನ್ನು ಸಿಎಂ ವಿರುದ್ದ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.
ಚುನಾಣೆಗಾಗಿ ಈಗಾಗಲೇ ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದು, ಶಿಗ್ಗಾವಿಯಲ್ಲಿ ಪಂಚಮಸಾಲಿಯ ಪ್ರಭಾವಿ ನಾಯಕ ವಿನಯ್ ಕುಲಕರ್ಣಿ ಅವರನ್ನು ಸಿಎಂ ಎದುರು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಇನ್ನು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ವಿನಯ್ ಕುಲಕರ್ಣಿಕ ಒಪ್ಪಿಕೊಂಡಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.ವಿನಯ್ ಲಿಂಗಾಯತ ಪಂಚಮಸಾಲಿ ಸಮುದಾಯದ ಪ್ರಭಾವಿ ನಾಯಕನಾಗಿದ್ದು, ಸಿ ಎಂ ವಿರುದ್ಧ ಪ್ರಬಲ ಅಭ್ಯರ್ಥಿ ಎಂದು ತೀರ್ಮಾನಕ್ಕೆ ಕಾಂಗ್ರೆಸ್ ಬಂದಿದೆ. ಇನ್ನು . ಶಿಗ್ಗಾವಿಯಲ್ಲಿ ಪ್ರಭಲ ಹಿಡಿತ ಹೊಂದಿರುವ ಅಜ್ಜಂಪೀರ್ ಖಾದ್ರಿ ತನಗೆ ಟಿಕೆಟ್ ಕೊಡದಿದ್ದಲ್ಲಿ ವಿನಯ್ ಕೊಡಲು ಸಹಮತ ತೋರಿಸಿದ್ದು, ಖಾದ್ರಿ ವಿಶ್ವಾಸಕ್ಕೆ ತೆಗೆದುಕೊಂಡು ವಿನಯ್ ಕುಲಕರ್ಣಿ ಕಣಕ್ಕಿಳಿಸಿವ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಇದೆ.