ಸಿದ್ದರಾಮನಹುಂಡಿಯಲ್ಲಿ ಬಿಜೆಪಿಯಿಂದ ಜಗಳಕ್ಕೆ ರಾಜಕೀಯ ಬಣ್ಣ ಹಚ್ಚಲಾಗಿದೆ: ಯತೀಂದ್ರ ತಿರುಗೇಟು

ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ ಆರೋಪ ವಿಚಾರವಾಗಿ ಬಿಜೆಪಿ ರಾಜಕೀಯ ಬಣ್ಣ ಬಳಿದು, ತನ್ನ ಬೇಳೆ ಬೇಯಿಸಿಕೊಳ್ಳಲು ನೋಡುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

First Published Apr 28, 2023, 12:33 PM IST | Last Updated Apr 28, 2023, 12:33 PM IST

ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ ಆರೋಪ ವಿಚಾರವಾಗಿ ಬಿಜೆಪಿ ರಾಜಕೀಯ ಬಣ್ಣ ಬಳಿದು, ತನ್ನ ಬೇಳೆ ಬೇಯಿಸಿಕೊಳ್ಳಲು ನೋಡುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದ ಜತೆ ಮಾತನಾಡಿದ ಅವರು ನಾನು ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದೇನೆ, ಅಲ್ಲಿ ರಾಜಕೀಯ ಕಾರಣಕ್ಕಾಗಿ ಜಗಳ ನಡೆದಿಲ್ಲ. ಕಾರು ಮತ್ತು ಬೈಕ್‌ಗೆ ಅಪಘಾತ ನಡೆದಿದ್ದರಿಂದ ಜಗಳವಾಗಿದೆ, ನಾಗೇಶ್ ಎನ್ನುವವರ ಮೇಲೆ ಹಲ್ಲೆಯಾಗಿದೆ ಪೊಲೀಸರು ಕೂಡ ಅದನ್ನೇ ಹೇಳಿದ್ದಾರೆ.ಬಿಜೆಪಿ ನಾಯಕರು ಸುಮ್ಮನೆ ಸುಳ್ಳು ಆರೋಪ ಮಾಡುತ್ತಿದ್ದಾರೆ.ಬಿಜೆಪಿಯವರು ಎಲ್ಲಾ ಕಡೆ ಇದೇ ರೀತಿ ಮಾಡುತ್ತಿದ್ದಾರೆ, ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಗಲಭೆ ಮಾಡಿಸುವ ಮೂಲಕ ರಾಜಕೀಯ ಮಾಡಲು ಪ್ರಯತ್ನಿಸುತ್ತಿದ್ದಾರೆ, ನಾನು ನನ್ನ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದೇನೆ, ಬಿಜೆಪಿಯವರು ಎಷ್ಟೇ ಪ್ರಚೋದನೆ ಮಾಡಿದರು ತಾಳ್ಮೆ ಕಳೆದುಕೊಳ್ಳಬೇಡಿ, ಪ್ರಚಾರ ಮಾಡುವ ಹಕ್ಕು ಇದೆ ಎಂದರು.

Video Top Stories