ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ, ಏ.8ಕ್ಕೆ ಪ್ರಕಟಿಸಲು ಮುಂದಾದ ಹೈಕಮಾಂಡ್!
ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಈ ಕುರಿತ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಏಪ್ರಿಲ್ 8 ರಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಮೂರು ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆ ಆರಂಭಗೊಂಡಿದೆ. ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇದೀಗ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಲು ಮುಂದಾಗಿದೆ. ಸದ್ಯ ಕರ್ನಾಟಕದಲ್ಲಿ ಅಭ್ಯರ್ಥಿ ಕುರಿತು ಜನಾಭಿಪ್ರಾಯ ಸಂಗ್ರಹಿಸಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ. ಆಯಾ ಜಿಲ್ಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಮತದಾನ ನಡೆಯಲಿದೆ. ಗೆಲುವಿನ ಅಭ್ಯರ್ಥಿಗೆ ಟಿಕೆಟ್ ನೀಡಲು ಪ್ಲಾನ್ ಮಾಡಲಾಗಿದೆ.ಏಪ್ರಿಲ್ 8 ರಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.