ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್‌ ಶೋ: ಹಲವೆಡೆ ರಸ್ತೆ ಸಂಚಾರಕ್ಕೆ ನಿರ್ಬಂಧ

ವಿಧಾನಸಭೆ ಚುನಾವಣೆ ಕಣದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಅಬ್ಬರವಿರಲಿದೆ. ಒಂದೇ ದಿನ ಮೂರು ಕಡೆಗಳಲ್ಲಿ ಸಾರ್ವಜನಿಕ ಸಭೆ ಹಾಗೂ ರಾಜಧಾನಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ.

First Published Apr 29, 2023, 11:04 AM IST | Last Updated Apr 29, 2023, 11:04 AM IST

ವಿಧಾನಸಭೆ ಚುನಾವಣೆ ಕಣದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಅಬ್ಬರವಿರಲಿದೆ. ಒಂದೇ ದಿನ ಮೂರು ಕಡೆಗಳಲ್ಲಿ ಸಾರ್ವಜನಿಕ ಸಭೆ ಹಾಗೂ ರಾಜಧಾನಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ.ಪ್ರಧಾನಿ ಭೇಟಿ ಹಾಗೂ ರೋಡ್‌ ಶೋ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಖಾಕಿ ಕಟ್ಟೆಚ್ಚರ ವಹಿಸಿದ್ದು, ರೋಡ್‌ ಶೋ ಮಾರ್ಗದಲ್ಲಿ ಹೆಜ್ಜೆಹೆಜ್ಜೆಗೂ ಪೊಲೀಸರು ಕಾರ್ಯನಿರ್ವಹಿಸಲಿದ್ದಾರೆ.ನಗರದ ವಿವಿಧೆಡೆ ಶ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದ್ದು,ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 7.30ರವರೆಗೆ ಸಂಚಾರ ನಿರ್ಬಂಧ ಹೇರಲಾಗಿದೆ. ಹಳೆ ವಿಮಾನ ನಿಲ್ದಾಣ ರಸ್ತೆ, ಕೇಂಬ್ರಿಡ್ಜ್‌ ಲೇಔಟ್‌ ರಸ್ತೆ, ಕಬ್ಬನ್‌ ರಸ್ತೆ, ಡಿಕನ್ಸನ್‌ ರಸ್ತೆ, ಅಂಬೇಡ್ಕರ್‌ ರಸ್ತೆ, ಕೆ.ಆರ್‌.ಸರ್ಕಲ್‌, ನೃಪತುಂಗ ರಸ್ತೆ, ಲಾಲ್‌ಬಾಗ್‌ ಪಶ್ಚಿಮ ದ್ವಾರ ರಸ್ತೆ, ಲಾಲ್‌ಬಾಗ್‌ ಮುಖ್ಯ ರಸ್ತೆ, ಬಸವನಗುಡಿ 50 ಅಡಿ ಕೆನರಾ ಬ್ಯಾಂಕ್‌ ರಸ್ತೆ, ಕೃಂಬಿಗಲ್‌ ರಸ್ತೆ, ಆರ್‌.ವಿ.ಕಾಲೇಜು ರಸ್ತೆ, ದೇವಾಂಗ ರಸ್ತೆಯಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
 

Video Top Stories