ಬೆಂಗಳೂರಿನಲ್ಲಿ ಪ್ರಿಯಾಂಕಾ ಗಾಂಧಿ ರೋಡ್ ಶೋ... ಕೃಷ್ಣಪ್ಪ, ಪ್ರಿಯಾಕೃಷ್ಣ ಪರ ಮತಯಾಚನೆ

 ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ಕೊನೆಯ ದಿನವಾದ ಇಂದು  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿನ ರೋಡ್ ಶೋ ನಡೆಸಿದರು.ವಿಜಯನಗರ ಶಾಸಕ ಎಂ ಕೃಷ್ಣಪ್ಪ ಮತ್ತು ಪಕ್ಕದ ಗೋವಿಂದರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾ ಕೃಷ್ಣ ಪರ ಮತಯಾಚಿಸಿದರು. 

Share this Video
  • FB
  • Linkdin
  • Whatsapp

 ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ಕೊನೆಯ ದಿನವಾದ ಇಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿನ ರೋಡ್ ಶೋ ನಡೆಸಿದರು.ವಿಜಯನಗರ ಶಾಸಕ ಎಂ ಕೃಷ್ಣಪ್ಪ ಮತ್ತು ಪಕ್ಕದ ಗೋವಿಂದರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾ ಕೃಷ್ಣ ಪರ ಮತಯಾಚಿಸಿದರು. ಇನ್ನು ಪ್ರಚಾರದಲ್ಲಿ ರಾಜಕೀಯ ಪಕ್ಷಗಳ ಪ್ರಮುಖ ಮುಖಂಡರು, ಎದುರಾಳಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದು, . ಕರ್ನಾಟಕದಲ್ಲಿ ಜನರ ಸಮಸ್ಯೆಗಳು, ಸವಾಲುಗಳು ನೋಡಬೇಕಿದೆ. ಬೆಲೆ ಏರಿಕೆ, ನಿರುದ್ಯೋಗ ಸೇರಿದಂತೆ ಹಲವು ಮೂಲಭೂತ ಸಮಸ್ಯೆಗಳ ಬಗ್ಗೆ ಮೋದಿ ಮಾತನಾಡುತ್ತಿಲ್ಲ ಎಂದು ಹೇಳಿದರು. ಹಾಗೇ ಕರ್ನಾಟಕದಲ್ಲಿ ಭ್ರಷ್ಟಾಚಾರ, ಲೂಟಿ ನಡೆಯುತ್ತಿದೆ ಪ್ರಧಾನಿ ಮೋದಿ ಇದರ ಬಗ್ಗೆ ಮಾತನಾಡುತ್ತಿಲ್ಲ. ಕರ್ನಾಟಕದ ಜನ ಸುಸಂಸ್ಕೃತರು, ವಿಶ್ವ ಮಟ್ಟದಲ್ಲಿ ಕರ್ನಾಟಕದವರು ಹೆಸರು ಮಾಡಿದ್ದಾರೆ. ಕರ್ನಾಟಕದ ಸರಕಾರ ಯಾವ ಸಮಸ್ಯೆಗಳನ್ನು ಬಗೆಹರಿಸಿದೆ, ಯಾವ ಸಮಸ್ಯೆಗೆ ಪರಿಹಾರ ನೀಡಿದೆ ಎಂದು ಪ್ರಶ್ನಿಸಿದರು. ಹಾಗೇ ಚುನಾವಣೆ ನಮ್ಮ ಭವಿಷ್ಯದ ಬಗ್ಗೆ ನಿರ್ಧರಿಸಬೇಕಿದೆ, ರಾಷ್ಟದ ಭವಿಷ್ಯಕ್ಕೆ ದಿಕ್ಸೂಚಿ ಎಂದು ಹೇಳಿದರು 

Related Video