karnataka election results 2023: ರಾಜ್ಯಾದ್ಯಂತ ಅಂಚೆಮತಗಳ ಎಣಿಕೆ ಆರಂಭ..

80 ವರ್ಷ ಮೇಲ್ಪಟ್ಟ ವೃದ್ಧರು, ಪೊಲೀಸರು, ಚುನಾವಣಾ ಕಾರ್ಯಕ್ಕೆ ತೆರಳುವ ಸಿಬ್ಬಂದಿ ಹಾಗೂ ಪತ್ರಕರ್ತರಿಗೆ ಅಂಚೆ ಮತದಾನ ಮಾಡಲು ಅವಕಾಶ ನೀಡಲಾಗಿತ್ತು. ಈಗ ಮೊದಲು ಅಂಚೆ ಮತ ಎಣಿಕೆ ಆರಂಭವಾಗಿದೆ.

First Published May 13, 2023, 8:51 AM IST | Last Updated May 13, 2023, 9:32 AM IST

ರಾಜ್ಯಾದ್ಯಂತ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. ವಿಧಾನಸಭಾ ಚುನಾವಣಾ ಮತದಾನಕ್ಕಿಂತ ಒಂದು ವಾರದಿಂದ ಮೊಲದೇ 80 ವರ್ಷ ಮೇಲ್ಪಟ್ಟ ವೃದ್ಧರು, ಪೊಲೀಸರು, ಚುನಾವಣಾ ಕಾರ್ಯಕ್ಕೆ ತೆರಳುವ ಸಿಬ್ಬಂದಿ ಹಾಗೂ ಪತ್ರಕರ್ತರಿಗೆ ಅಂಚೆ ಮತದಾನ ಮಾಡಲು ಅವಕಾಶ ನೀಡಲಾಗಿತ್ತು. ಈಗ ಮೊದಲು ಅಂಚೆ ಮತ ಎಣಿಕೆ ಆರಂಭವಾಗಿದೆ.16ನೇ ವಿಧಾನಸಭಾ ಚುನಾವಣೆಯು ಮೇ 10ರಂದು ಒಂದೇ ಹಂತದಲ್ಲಿ ನಡೆದಿತ್ತು. ರಾಜ್ಯದ ಎಲ್ಲೆಡೆ ಸ್ಥಾಪನೆಯಾದ 58,545 ಮತಗಟ್ಟೆಗಳಲ್ಲಿ 2615 ಅಭ್ಯರ್ಥಿಗಳ ಭವಿಷ್ಯವನ್ನು 3.8 ಕೋಟಿ ಮತದಾರರು ಬರೆದಿದ್ದು, ಒಟ್ಟಾರೆ ದಾಖಲೆಯುತ ಶೇ.73.19ರಷ್ಟು ಮತದಾನವಾಗಿತ್ತು.