ಚುನಾವಣೆ ಹೊತ್ತಲ್ಲಿ ಹೈಕಮಾಂಡ್‌ಗೆ ಸಿದ್ದು ಸೆಡ್ಡು, ಸಿಎಂ ಕುರ್ಚಿಗೆ ಟವಲ್ ಹಾಕಿ ಆಕಾಂಕ್ಷಿಗಳಿಗೆ ಗುದ್ದು!
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಮಾತ್ರ ಬಾಕಿ. ಆಗಲೇ ಕಾಂಗ್ರೆಸ್‌ನಲ್ಲಿ ಸಿಎಂ ರೇಸ್ ಹೆಚ್ಚಾಗಿದೆ. ಇದೀಗ ಲಕೋಟೆಯಲ್ಲಿ ಸಿಎಂ ಆಯ್ಕೆ ಮಾಡುವ ಕಾಂಗ್ರೆಸ್ ಸಂಪ್ರದಾಯ ಇನ್ನು ನಡೆಯಲ್ಲ. ಶಾಸಕರ ಅಭಿಪ್ರಾಯದಂತೆ ಸಿಎಂ ಆಯ್ಕೆಯಾಗಲಿದೆ ಎಂದು ಸಿದ್ದು ಹೇಳುವ ಮೂಲಕ ಡಿಕೆ ಶಿವಕುಮಾರ್‌ಗೆ ಪರೋಕ್ಷವಾಗಿ ಗುದ್ದು ನೀಡಿದೆ.
ಬೆಂಗಳೂರು(ಏ.04): ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ಇದರ ನಡುವೆ ಈ ಬಾರಿ ಅಧಿಕಾರಕ್ಕೇರುವ ವಿಶ್ವಾಸದಲ್ಲಿರುವ ಕಾಂಗ್ರೆಸ್‌ಗೆ ಸಿಎಂ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗುತ್ತಿದೆ. ಸಿದ್ದರಾಮಯ್ಯ ಈಗಾಗಲೇ ಹೈಕಮಾಂಡ್‌ಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಲಕೋಟೆಯಲ್ಲಿ ಸಿಎಂ ಮಾಡುವ ಕಾಂಗ್ರೆಸ್ ಪದ್ದತಿ ನಡೆಯಲ್ಲ. ಶಾಸಕರ ಅಭಿಪ್ರಾಯದಂತೆ ಸಿಎಂ ಆಯ್ಕೆಯಾಗಲಿದೆ ಎಂದಿದ್ದಾರೆ. ಈ ಮೂಲಕ ಸಿಎಂ ರೇಸ್‌ನಲ್ಲಿ ಕಾಣಿಸಿಕೊಂಡಿರುವ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್‌ಗೂ ಸ್ಪಷ್ಟ ಸಂದೇಶ ನೀಡಿದ್ದಾರೆ.