ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆಯಲ್ಲಿ ಬಿಜೆಪಿ ಎಚ್ಚರಿಕೆ ನಡೆ: ಗುಜರಾತ್ ಮಾದರಿಯಲ್ಲಿ ಟಿಕೆಟ್ ಹಂಚಿಕೆ!
ಸದ್ಯ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಬಿಜೆಪಿಯಲ್ಲಿ ಚುರುಕುಗೊಂಡಿದ್ದು, ಕ್ಷೇತ್ರದಲ್ಲಿ 5 - 6 ಸಲ ಗೆದ್ದವರಿಗೂ ಸಹ ಒಂದೇ ನಿಯಮ ಎಂದು ತಿಳಿದುಬಂದಿದೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು 38 ದಿನಗಳು ಮಾತ್ರ ಬಾಕಿ ಇದ್ದು, ಬಿಜೆಪಿ ಈವರೆಗೆ ತನ್ನ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಬಿಡುಗಡೆ ಮಾಡಿಲ್ಲ. ಗುಜರಾತ್ ಮಾದರಿ ಟಿಕೆಟ್ ಹಂಚಿಕೆಗೆ ಕೇಸರಿ ಪಡೆ ತಾಲೀಮು ನಡೆಸಿದ್ದು, ಅಭ್ಯರ್ಥಿ ಆಯ್ಕೆಯಲ್ಲಿ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ. ಸದ್ಯ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಬಿಜೆಪಿಯಲ್ಲಿ ಚುರುಕುಗೊಂಡಿದ್ದು, ಕ್ಷೇತ್ರದಲ್ಲಿ 5 - 6 ಸಲ ಗೆದ್ದವರಿಗೂ ಸಹ ಒಂದೇ ನಿಯಮ ಎಂದು ತಿಳಿದುಬಂದಿದೆ. ಗುಜರಾತ್ ಮಾದರಿಯಲ್ಲಿ ಟಿಕೆಟ್ ಹಂಚಿಕೆಗೆ ನಿರ್ಧಾರ ಮಾಡಿದ್ದು, ಜನಪ್ರತಿನಿಧಿಗಳಿಂದ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ. ಏಪ್ರಿಲ್ 8 ಕ್ಕೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತಿದೆ.