Ground Report: ಜೆಡಿಎಸ್ ಭದ್ರಕೋಟೆಯಲ್ಲಿ ರಾಜಕೀಯ ಜಿದ್ದು: ಹಾಸನದಲ್ಲಿ ಹೆಚ್ಚು ಕಮಲ ಅರಳಿಸಲು ಪ್ಲಾನ್
ಹಾಸನ ಜಿಲ್ಲೆಯು ಜೆಡಿಎಸ್ ಭದ್ರಕೋಟೆ. 7 ಕ್ಷೇತ್ರಗಳ ಪೈಕಿ ಆರರಲ್ಲಿ ಜೆಡಿಎಸ್ ಶಾಸಕರೇ ಇದ್ದಾರೆ. ಹಾಸನ ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರಾಗಿದ್ದಾರೆ. ಇಲ್ಲಿ ಒಕ್ಕಲಿಗ ಸಮುದಾಯದ್ದೇ ನಿರ್ಣಾಯಕ ಮತ.
ಹಾಸನ: ಹಾಸನದಿಂದ ದಿ. ಪ್ರಕಾಶ್ ಪುತ್ರ ಸ್ವರೂಪ್ ಜೆಡಿಎಸ್ ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದಾರೆ. ರೇವಣ್ಣ ಪತ್ನಿ ಭವಾನಿ ರೇವಣ್ಣ ಕೂಡ ಸ್ಪರ್ಧಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಬಿಜೆಪಿಯಿಂದ ಪ್ರೀತಂ ಗೌಡ ಏಕೈಕ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್‌ನಿಂದ ಬಾಗೂರು ಮಂಜೇಗೌಡ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಬೇಲೂರಿನಲ್ಲಿ ಶಾಸಕ ಲಿಂಗೇಶ್ ಜೆಡಿಎಸ್‌ನಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿಯಿಂದ ಹುಲ್ಲಳ್ಳಿ ಸುರೇಶ್ ಟಿಕೆಟ್‌ಗೆ ಯತ್ನ ನಡೆಸಿದ್ದಾರೆ. ಕಾಂಗ್ರೆಸ್‌ನಿಂದ ರುದ್ರೇಶಗೌಡರ ಸಹೋದರ ಕೃಷ್ಣೇಗೌಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈವರೆಗೆ ಜೆಡಿಎಸ್‌ನಲ್ಲಿ ಗುರ್ತಿಸಿಕೊಂಡಿದ್ದ ಗ್ರಾನೈಟ್ ರಾಜಶೇಖರ್, ಗಂಡಸಿ ಶಿವರಾಂ ಕೂಡ ಟಿಕಟ್ ಆಕಾಂಕ್ಷಿಯಾಗಿದ್ದಾರೆ. ಅರಸೀಕೆರೆ ಕ್ಷೇತ್ರದಲ್ಲಿ ಶಿವಲಿಂಗೇಗೌಡರು ಜೆಡಿಎಸ್ ಟಿಕೆಟ್ ಆಕಾಂಕ್ಷಿ. ಬಿಜೆಪಿಯಿಂದ ಎನ್.ಆರ್ ಸಂತೋಷ್ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದಾರೆ. ಇನ್ನು ಕಾಂಗ್ರೆಸ್‌ನಿಂದ ಪಟೇಲ್ ಶಿವಪ್ಪ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಚೆನ್ನರಾಯಪಟ್ಟಣದಲ್ಲಿ ಸಿ.ಎನ್ ಬಾಲಕೃಷ್ಣ ಜೆಡಿಎಸ್ ಟಿಕೆಟ್ ಆಕಾಂಕ್ಷಿ. ಜತ್ತೇನಹಳ್ಳಿ ರಾಮಚಂದ್ರು, ಎಂ.ಎ ಗೋಪಾಲಸ್ವಾಮಿ, ಶಂಕರ್ ಕಾಂಗ್ರೆಸ್ ಟಿಕೆಟ್‌ಗೆ ಪ್ರಯತ್ನ ನಡೆಸಿದ್ದಾರೆ. ಇನ್ನು ಈ ಕ್ಷೇತ್ರದಲ್ಲಿ ಬಿಜೆಪಿ ಹೇಳಿಕೊಳ್ಳುವಂತಹ ವರ್ಚಸ್ಸು ಬೆಳೆಸಿಕೊಂಡಿಲ್ಲ. ಹೊಳೆನರಸೀಪುರದಿಂದ ಹೆಚ್.ಡಿ ರೇವಣ್ಣಗೆ ಜೆಡಿಎಸ್ ಟಿಕೆಟ್. ಕಾಂಗ್ರೆಸ್ ಹಾಗೂ ಬಿಜೆಪಿ ಟಿಕೆಟ್‌ಗೆ ಅಷ್ಟಾಗಿ ಆಕಾಂಕ್ಷಿಗಳು ಕಂಡುಬರುತ್ತಿಲ್ಲ. ಜೆಡಿಎಸ್ ಶಾಸಕ ಎ.ಟಿ ರಾಮಸ್ವಾಮಿ ಈ ಬಾರಿಯೂ ಜೆಡಿಎಸ್'ನಿಂದ ಸ್ಪರ್ಧಿಸಬಹುದು.