Karnataka Elections: ಡಿಕೆಶಿ- ಸಿದ್ದರಾಮಯ್ಯ ಬೆಂಬಲಿಗರಿಂದ ಟಿಕೆಟ್‌ ಪೈಪೋಟಿ

ವಿಧಾನಸಭೆ ಚುನಾವಣೆ ಸಮೀಪವಾಗುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಬಣ ಬಡಿದಾಟ ಹೆಚ್ಚಾಗಿದೆ. ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಆಪ್ತರು ಒಂದೇ ಕ್ಷೇತ್ರಕ್ಕೆ ಟಿಕೆಟ್‌ಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ನ.16): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ 6 ತಿಂಗಳಿಗಿಂತ ಕಡಿಮೆ ಸಮಯ ಇರುವಂತೆಯೇ ಕಾಂಗ್ರೆಸ್‌ನಲ್ಲಿ ಬಣ ಬಡಿದಾಟ ಜೋರಾಗಿದೆ. ಟಿಕೆಟ್‌ಗಾಗಿ ಈಗಾಗಲೇ ಡಿಕೆ ಶಿವಕುಮಾರ್‌ ಹಾಗೂ ಸಿದ್ಧರಾಮಯ್ಯ ಬೆಂಬಲಿಗರು ಹೋರಾಟ ಆರಂಭಿಸಿದ್ದಾರೆ.

ಒಂದೇ ಕ್ಷೇತ್ರಕ್ಕೆ ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರ ಬೆಂಬಲಿಗರು ಅರ್ಜಿ ಸಲ್ಲಿಸುತ್ತಿದ್ದಾರೆ. 6ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಡಿಕೆಶಿ ಹಾಗೂ ಸಿದ್ದು ಬೆಂಬಲಿಗರು ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ವರದಿಯಾಗಿದೆ. ಹಾಲಿ ಶಾಸಕರಿಗೆ ಟಿಕೆಟ್‌ ಖಚಿತವಾಗಿದ್ದರೂ, ಅದೇ ಕ್ಷೇತ್ರದಲ್ಲಿ ಟಿಕೆಟ್‌ ಪಡೆಯಲು ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರೆ.

ಹಿಂದುಗಳ ಕೆರಳಿಸಿದ ಸತೀಶ್‌ ಜಾರಕಿಹೊಳಿ ಮಾತು, ಕ್ಷಮೆ ಕೇಳಲ್ಲ ಎಂದ ಕಾಂಗ್ರೆಸ್ ನಾಯಕ!

ಶಿವಾಜಿನಗರದ ಟಿಕೆಟ್‌ಗಾಗಿ ಡಿಕೆಶಿ ಆಪ್ತ ನಲಪಾಡ್‌ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇನ್ನು ಸಿದ್ಧರಾಮಯ್ಯ ಬಣದ ಹಾಲಿ ಶಾಸಕ ರಿಜ್ವಾನ್‌ ಅರ್ಷದ್‌ ಕೂಡ ಟಿಕೆಟ್‌ ಪಡೆಯುವ ಹಾದಿಯಲ್ಲಿದ್ದಾರೆ. ಇನ್ನು ಪುಲುಕೇಶಿ ನಗರಕ್ಕೆ ಅಖಂಡ ಶ್ರೀನಿವಾಸ್‌ ಹಾಗೂ ಪ್ರಸನ್ನ ಕುಮಾರ್‌ ಅರ್ಜಿ ಸಲ್ಲಿಸಿದ್ದಾರೆ.

Related Video