ವಿಧಾನಸಭೆಯಲ್ಲಿ ಧರಣಿ ಮುಂದುವರಿಸಲು ಕಾಂಗ್ರೆಸ್ ನಿರ್ಧಾರ, ಇದಕ್ಕೆ ಸಿಎಂ ಹೇಳಿದ್ದಿಷ್ಟು

ವಿಧಾನಸಭೆಯಲ್ಲಿ ರಾಷ್ಟ್ರಧ್ವಜ ಹಿಡಿದು ಸದನದ ಬಾವಿಗೆ ಇಳಿದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ದೇಶದ್ರೋಹಿ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಹಿಸಿದರು. ಕಾಂಗ್ರೆಸ್ ಪಕ್ಷದಿಂದ ಧ್ವಜ ಸಂಹಿತೆ ಉಲ್ಲಂಘನೆ ಆಗಿದೆ. ಅವರು ರಾಷ್ಟ್ರಧ್ವಜವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು. 

Share this Video
  • FB
  • Linkdin
  • Whatsapp

ಬೆಂಗಳೂರು, (ಫೆ.17): ಒಂದೆಡೆ ಕರ್ನಾಟಕದಲ್ಲಿ ಹಿಜಾಬ್ ಕಿಚ್ಚು ಜೋರಾಗಿದೆ. ಇದರ ಮಧ್ಯೆ ವಿಧಾನಸಭೆ ಸ್ಪೀಕರ್ ಕಚೇರಿಯಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದ್ದು ಸದನದಲ್ಲಿ ಧರಣಿ ಮುಂದುವರಿಸಲು ಪ್ರತಿಪಕ್ಷ ಕಾಂಗ್ರೆಸ್ ತೀರ್ಮಾನಿಸಿದೆ. ವಿಧಾನಸಭೆ ಪುನರಾರಂಭವಾದ ನಂತರ ಕಾಂಗ್ರೆಸ್ ಶಾಸಕರು ರಾಷ್ಟ್ರಧ್ವಜ ಹಿಡಿದು ಕಲಾಪಕ್ಕೆ ಹಾಜರಾದರು. 

Asianet Suvarna Special ಕೈ-ಕೈ ಮಿಲಾಯಿಸುವ ಹಂತಕ್ಕೆ ಡಿಕೆಶಿ-ಈಶ್ವರಪ್ಪ, ಅಷ್ಟಕ್ಕೂ ಆಗಿದ್ದೇನು? ವೈಯಕ್ತಿಕ ದಾಳಿಗೆ ಕಾರಣವೇನು?

ವಿಧಾನಸಭೆಯಲ್ಲಿ ರಾಷ್ಟ್ರಧ್ವಜ ಹಿಡಿದು ಸದನದ ಬಾವಿಗೆ ಇಳಿದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ದೇಶದ್ರೋಹಿ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಹಿಸಿದರು. ಕಾಂಗ್ರೆಸ್ ಪಕ್ಷದಿಂದ ಧ್ವಜ ಸಂಹಿತೆ ಉಲ್ಲಂಘನೆ ಆಗಿದೆ. ಅವರು ರಾಷ್ಟ್ರಧ್ವಜವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು. 

ಇದಕ್ಕೂ ಮೊದಲು ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿಲುವಳಿ ಸೂಚನೆ ಸಂಬಂಧ ಎರಡೂ ಪಕ್ಷದ ಶಾಸಕರ ಸಂಧಾನ ಸಭೆ ನಡೆಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಬಿ.ಸಿ.ನಾಗೇಶ್, ಜೆ.ಸಿ.ಮಾಧುಸ್ವಾಮಿ ಮತ್ತು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಯು.ಟಿ.ಖಾದರ್, ಬಿ.ಎಂ.ಬಿ.ಎಂ.ಪಾಟೀಲ್​ ಹಾಜರುಪಡಿಸಿದರು.

Related Video