News Hour: ಭಜರಂಗಿಗಳ ತಂಟೆಗೆ ಬಂದು ಕೈಸುಟ್ಟಿಕೊಂಡಿತಾ ಕಾಂಗ್ರೆಸ್?
ಭಜರಂಗದಳ ಹಾಗೂ ಪಿಎಫ್‌ಐ ಸೇರಿದಂತೆ ಕಾನೂನಿಗೆ ಧಕ್ಕೆ ನೀಡುವ ಸಂಘಟನೆಗಳ ವಿರುದ್ಧ ನಿಷೇಧ ಹಾಗೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಬರೆದಿರುವುದೇ ಈಗ ವಿವಾದಕ್ಕೆ ಕಾರಣವಾಗಿದೆ.
ಬೆಂಗಳೂರು (ಮೇ. 3): ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಕಟ ಮಾಡಿರುವ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧವನ್ನು ಪ್ರಸ್ತಾಪ ಮಾಡುವ ಮೂಲಕ ಎಡವಟ್ಟು ಮಾಡಿಕೊಂಡಿದೆ. ಹಾಗಾದರೆ, ಒಂದು ಸಂಘಟನೆಯನ್ನು ನಿಷೇಧ ಮಾಡಬೇಕಾದರೆ ಇರುವ ನಿಯಮಗಳೇನು?
ಇನ್ನೊಂದೆಡೆ, ಭಜರಂಗದಳ ನಿಷೇಧ ಪ್ರಸ್ತಾಪ ಮಾಡಿದ ಕಾಂಗ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ಟೀಕೆ ಮಾಡಿದ್ದಾರೆ. ಕಾಂಗ್ರೆಸ್‌ನಿಂದ ರಾಮನಿಗೂ ಕಷ್ಟ, ಜೈ ಭಜರಂಗಬಲಿ ಎನ್ನುವವರಿಗೂ ಕಷ್ಟ ಎಂದು ಪ್ರಧಾನಿ ಹೇಳಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ಉತ್ತರ ನೀಡಿದ್ದು, ಕೋಮುವಾದ ಕೆಲಸ ಮಾಡಿದ್ರೆ ಆ ಸಂಘಟನೆಯನ್ನು ಬ್ಯಾನ್ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನಿಷೇಧದ ಭರವಸೆ, ದೇಶದ ಬಲ 'ಭಜರಂಗದಳ' ಟ್ವಿಟರ್‌ನಲ್ಲಿ ಟ್ರೆಂಡ್!
ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಪ್ರಸ್ತಾಪ ಮಾಡುವ ಮೂಲಕ ಕಾಂಗ್ರೆಸ್ ಮತ್ತೆ ವಿವಾದಕ್ಕೆ ಈಡಾಗಿದೆ. ಇದನ್ನೇ ಅಸ್ತ್ರವಾಗಿಸಿಕೊಂಡ ಬಿಜೆಪಿ ನಾಯಕರು ಒಂದರ ಮೇಲೊಂದರಂತೆ ಕಾಂಗ್ರೆಸ್ ಪಕ್ಷದ ವಿರುದ್ಧ ಟೀಕೆ ಆರಂಭಿಸಿದ್ದಾರೆ.