ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಹೈಕಮಾಂಡ್ ಸಂದೇಶವನ್ನ ಸಿಎಂಗೆ ತಿಳಿಸಿದ ಉಸ್ತುವಾರಿ..!
ಭಾರೀ ಕುತೂಹಲ ಕೆರಳಿಸಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ.
ಬೆಳಗಾವಿ, (ಡಿ.05): ಭಾರೀ ಕುತೂಹಲ ಕೆರಳಿಸಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ದೆಹಲಿಯಿಂದ ಹೈಕಮಾಂಡ್ ಸಂದೇಶವನ್ನ ಹೊತ್ತು ತಂದಿದ್ದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಸಿಎಂಗೆ ತಿಳಿಸಿದ್ದಾರೆ.
ಹೈಕಮಾಂಡ್ನಿಂದ ಸಂದೇಶ ತಂದಿರುವೆ ಎಂದ ಉಸ್ತುವಾರಿ: ಸಂಪುಟ ವಿಸ್ತರಣೆಯೋ? ಪುನಾರಚನೆಯೋ?
ಹೌದು....ಇಂದು (ಶನಿವಾರ) ಬೆಳಗಾವಿಯಲ್ಲಿ ನಡೆದ ಕೋರ ಕಮಿಟಿ ಸಭೆಯಲ್ಲಿ ಅರುಣ್ ಸಿಂಗ್ ಅವರು ಸಂಪುಟ ವಿಸ್ತರಣೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮಹತ್ವದ ಸಲಹೆಗಳನ್ನ ನೀಡಿದ್ದಾರೆ. ಹಾಗಾದ್ರೆ, ಸಿಎಂಗೆ ಅರುಣ್ ಸಿಂಗ್ ಹೇಳಿದ್ದೇನು ಎನ್ನುವ ಮಾಹಿತಿ ಇಲ್ಲಿದೆ.