ಮುಂದಿನ ಚುನಾವಣೆಗೆ ಬಿಜೆಪಿ ತಯಾರಿ : 3 ದಿನಗಳ ಜನ ಸ್ವರಾಜ್ ಯಾತ್ರೆ
ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆ ಮತ್ತು ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ನಾಲ್ವರು ಹಿರಿಯ ನಾಯಕರ ನೇತೃತ್ವದಲ್ಲಿ ಬಿಜೆಪಿಯ 3 ದಿನಗಳ ಜನ ಸ್ವರಾಜ್ ಯಾತ್ರೆ ಇಂದಿನಿಂದ ಆರಂಭವಾಗಲಿದೆ.
ಬೆಂಗಳೂರು (ನ.18): ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆ ಮತ್ತು ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ನಾಲ್ವರು ಹಿರಿಯ ನಾಯಕರ ನೇತೃತ್ವದಲ್ಲಿ ಬಿಜೆಪಿಯ 3 ದಿನಗಳ ಜನ ಸ್ವರಾಜ್ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ನಾಲ್ಕು ಕಡೆ ಏಕಕಾಲದಲ್ಲಿ ಬಿಜೆಪಿ ಯಾತ್ರೆಗೆ ಚಾಲನೆ ದೊರಕಲಿದೆ.
ಉ.ಪ್ರ.ದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ? ಸಮೀಕ್ಷೆ ಭವಿಷ್ಯ
ಪಕ್ಷದ ಸಂಘಟನೆ, ಮುಂಬರುವ ವಿವಿಧ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆ ಕುರಿತು ಯಾತ್ರೆಯಲ್ಲಿ ಜನ ಜಾಗೃತಿ ಮೂಡಿಸಲಾಗುತ್ತದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಯಾತ್ರೆ ನಡೆಯಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಜನ ಸ್ವರಾಜ್ ಯಾತ್ರೆ ನಡೆಯುತ್ತಿದೆ.