ಇಂದಿನಿಂದ ಹೊಸ ಸರ್ಕಾರದ ಚೊಚ್ಚಲ ಬಜೆಟ್‌ ಅಧಿವೇಶನ: ಜುಲೈ 7 ರಂದು ಅಯವ್ಯಯ ಮಂಡನೆ

ಇಂದಿನಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದೆ. ಪ್ರತಿಪಕ್ಷಗಳ ಆರೋಪಕ್ಕೆ ಉತ್ತರ ನೀಡಲು ಆಡಳಿತ ಪಕ್ಷ ತಯಾರಿ ಮಾಡಿಕೊಂಡಿದೆ.

Share this Video
  • FB
  • Linkdin
  • Whatsapp

ಬೆಂಗಳೂರು: ಹೊಸ ಸರ್ಕಾರದ ಚೊಚ್ಚಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ರಾಜ್ಯಪಾಲ ಥಾವರ್‌ ಚಂದ್ ಗೆಹಲೋತ್‌ ಅವರನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಲಿದ್ದಾರೆ. ಸದ್ಯ ರಾಜ್ಯಪಾಲರ ಭಾಷಣದ ಬಗ್ಗೆ ಭಾರೀ ಕುತೂಹಲ ಮೂಡಿದೆ. ಬಳಿಕ ಪ್ರತಿಪಕ್ಷ ಮತ್ತು ಆಡಳಿತ ಪಕ್ಷಗಳ ನಡುವೆ ವಾಕ್ಸಮರ ನಡೆಯುವುದು ಗ್ಯಾರಂಟಿಯಾಗಿದೆ. ಮತಾಂತರ ನಿಷೇಧ ಹಾಗೂ ಗೋಹತ್ಯೆ ನಿಷೇಧ, ಎಪಿಎಂಸಿ ಕಾಯ್ದೆಯಂತಹ ವಿವಾದಿತ ಕಾಯಿದೆ ರದ್ದುಗೊಳಿಸಲು ತಿದ್ದುಪಡಿ ವಿಧೇಯಕಗಳ ಮಂಡನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಅದಕ್ಕೆ ಪ್ರತಿಯಾಗಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಲೋಪ ಸೇರಿದಂತೆ ವಿವಿಧ ವಿಚಾರ ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿ ಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಜು.3ರಿಂದ 14ರವರೆಗೆ 10 ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಜು.7ರಂದು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ಬಜೆಟ್‌ ಮಂಡಿಸಲಿದ್ದಾರೆ. 

ಇದನ್ನೂ ವೀಕ್ಷಿಸಿ: ಸದನ ಆರಂಭವಾದ್ರೂ ಆಯ್ಕೆಯಾಗದ ವಿಪಕ್ಷ ನಾಯಕ: ಇಂದು ರಾಜ್ಯಕ್ಕೆ ಆಗಮಿಸಲಿರುವ ವೀಕ್ಷಕರು

Related Video