Asianet Suvarna News Asianet Suvarna News

ಬಿಜೆಪಿಗೆ ಶಾಸ್ತಿ; ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮತ್ತೆ ದೋಸ್ತಿ?

ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮತ್ತೆ ಮೈತ್ರಿ ಮಾಡಿಕೊಳ್ಳುವ ಎಲ್ಲಾ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ. 2018 ವಿಧಾನಸಭಾ ಚುನಾವಣೆ ಫಲಿತಾಂಶ ಬಳಿಕ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್-ಜೆಡಿಎಸ್, ಸರ್ಕಾರ ಉರುಳಿದ ನಂತರ ಮತ್ತೆ ಹಾವು-ಮುಂಗುಸಿಯಂತೆ ಕಚ್ಚಾಡಲು ಆರಂಭಿಸಿದ್ದುವು. ಬಿಜೆಪಿ ಸರ್ಕಾರ ಉಳಿಯಬೇಕಾದ್ರೆ ಉಪಚುನಾವಣೆಯಲ್ಲಿ ಕನಿಷ್ಠ 8 ಸೀಟುಗಳನ್ನು ಗೆಲ್ಲಲೇಬೇಕಾಗಿದೆ. ಒಂದು ವೇಳೆ ಮತ್ತೆ ಅತಂತ್ರ ಸ್ಥಿತಿ ನಿರ್ಮಾಣವಾದರೆ, ಕಾಂಗ್ರೆಸ್-ಜೆಡಿಎಸ್ ಸೇರಿ ಸರ್ಕಾರ ರಚನೆ ಮಾಡುವ ಆಲೋಚನೆ ಇದೆಯಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

 

ಬೆಂಗಳೂರು (ನ.26): ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮತ್ತೆ ಮೈತ್ರಿ ಮಾಡಿಕೊಳ್ಳುವ ಎಲ್ಲಾ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ. 2018 ವಿಧಾನಸಭಾ ಚುನಾವಣೆ ಫಲಿತಾಂಶ ಬಳಿಕ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್-ಜೆಡಿಎಸ್, ಸರ್ಕಾರ ಉರುಳಿದ ನಂತರ ಮತ್ತೆ ಹಾವು-ಮುಂಗುಸಿಯಂತೆ ಕಚ್ಚಾಡಲು ಆರಂಭಿಸಿದ್ದುವು.

ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಬಿಜೆಪಿ ಸರ್ಕಾರ ಉಳಿಯಬೇಕಾದ್ರೆ ಕನಿಷ್ಠ 8 ಸೀಟುಗಳನ್ನು ಗೆಲ್ಲಲೇಬೇಕಾಗಿದೆ. ಒಂದು ವೇಳೆ ಮತ್ತೆ ಅತಂತ್ರ ಸ್ಥಿತಿ ನಿರ್ಮಾಣವಾದರೆ, ಕಾಂಗ್ರೆಸ್-ಜೆಡಿಎಸ್ ಸೇರಿ ಸರ್ಕಾರ ರಚನೆ ಮಾಡುವ ಆಲೋಚನೆ ಇದೆಯಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಶಾಸಕರ ರಾಜೀನಾಮೆಯಿಂದ ತೆರವಾಗಿರುವ 15 ಕ್ಷೇತ್ರಗಳಿಗೆ ಡಿ.05ರಂದು ಉಪಚುನಾವಣೆ ನಡೆಯಲಿದೆ. ಡಿ.09ಕ್ಕೆ ಮತ ಎಣಿಕೆ ನಡೆಯಲಿದ್ದು, ಕಣದಲ್ಲಿರುವ 165 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

Video Top Stories