ಹೊಸಕೋಟೆಯಲ್ಲಿ ರಕ್ತ ರಾಜಕೀಯ! MTB ಬೆಂಬಲಿಗನ ಮೇಲೆ ಹಲ್ಲೆ
ಮತದಾನ ದಿನಾಂಕ ಸಮೀಪಿಸುತ್ತಿದ್ದಂತೆ ಹೊಸಕೋಟೆ ಚುನವಣಾ ಕಣ ಹೊಡೆದಾಟ ಬಡಿದಾಟಗಳು ಶುರುವಾಗಿದೆ. ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ. ನಾಗರಾಜ್ ಬೆಂಬಲಿಗನ ಮೇಲೆ ರಾಡ್‌ನಿಂದ ಹಲ್ಲೆ ನಡೆದಿದೆ. ಶರತ್ ಬಚ್ಚೇಗೌಡ ಬೆಂಬಲಿಗರಿಂದ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಹೊಸಕೋಟೆ (ನ.27): ಮತದಾನ ದಿನಾಂಕ ಸಮೀಪಿಸುತ್ತಿದ್ದಂತೆ ಹೊಸಕೋಟೆ ಚುನವಣಾ ಕಣ ಹೊಡೆದಾಟ ಬಡಿದಾಟಗಳು ಶುರುವಾಗಿದೆ. ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ. ನಾಗರಾಜ್ ಬೆಂಬಲಿಗನ ಮೇಲೆ ರಾಡ್‌ನಿಂದ ಹಲ್ಲೆ ನಡೆದಿದೆ. ಶರತ್ ಬಚ್ಚೇಗೌಡ ಬೆಂಬಲಿಗರಿಂದ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಹೊಸಕೋಟೆಯಲ್ಲಿ ಕಾಂಗ್ರೆಸ್‌ನಿಂದ ಹೆಬ್ಬಾಳ ಶಾಸಕ ಭೈರತಿ ಸುರೇಶ್ ಪತ್ನಿ ಪದ್ಮಾವತಿ ಕಣದಲ್ಲಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ, ಸಂಸದ ಬಿ.ಎನ್. ಬಚ್ಚೇಗೌಡ ಪುತ್ರ ಶರತ್‌ಗೆ ಜೆಡಿಎಸ್ ಬೆಂಬಲ ಘೋಷಿಸಿದೆ.
ಡಿ.05ಕ್ಕೆ ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಡಿ.09ರಂದು ಮತ ಎಣಿಕೆ ನಡೆಯಲಿದ್ದು, ಕಣದಲ್ಲಿರುವ 165 ಅಭ್ಯರ್ಥಿಗಳ ಭವಿಷ್ಯ ಪ್ರಕಟವಾಗಲಿದೆ.