4 ಕ್ಷೇತ್ರಗಳಲ್ಲಿ ಬಿಜೆಪಿಗೆ ಬಂಡಾಯದ ಬಿಸಿ! ಕಮಲ ಪಡೆಗೆ ಸೋಲಿನ ಭೀತಿ?

15 ಕ್ಷೇತ್ರಗಳಲ್ಲಿ ಉಪಚುನಾವಣೆ ಅಖಾಡ ರಂಗೇರಿದೆ. ಅನರ್ಹ ಶಾಸಕರು ಪಕ್ಷಕ್ಕೆ ಸೇರಿದ್ದು ಮೂಲ ಬಿಜೆಪಿಗರಿಗೆ ನುಂಗಲಾರದ ತುತ್ತಾಗಿದೆ. ನಾಲ್ಕು ಕ್ಷೇತ್ರಗಳಲ್ಲಂತೂ ಸ್ಥಳೀಯ ನಾಯಕರು ಬಂಡಾಯದ ಬಾವುಟ ಹಾರಿಸಿದ್ದಾರೆ.

First Published Nov 16, 2019, 12:24 PM IST | Last Updated Nov 16, 2019, 4:42 PM IST

ಬೆಂಗಳೂರು (ನ.16): 15 ಕ್ಷೇತ್ರಗಳಲ್ಲಿ ಉಪಚುನಾವಣೆ ಅಖಾಡ ರಂಗೇರಿದೆ. ಅನರ್ಹ ಶಾಸಕರು ಪಕ್ಷಕ್ಕೆ ಸೇರಿದ್ದು ಮೂಲ ಬಿಜೆಪಿಗರಿಗೆ ನುಂಗಲಾರದ ತುತ್ತಾಗಿದೆ.

ಟಿಕ್ಟ್ ಹಂಚಿಕೆ ವಿಚಾರವಾಗಿ ನಾಲ್ಕು ಕ್ಷೇತ್ರಗಳಲ್ಲಂತೂ ಸ್ಥಳೀಯ ನಾಯಕರು ಬಂಡಾಯದ ಬಾವುಟ ಹಾರಿಸಿದ್ದಾರೆ. ಬಿಜೆಪಿಗೆ ಇದು ತಲೆನೋವಾಗಿ ಪರಿಣಮಿಸಿದೆ. 

ಶಾಸಕರ ರಾಜೀನಾಮೆಯಿಂದ ತೆರವಾಗಿರುವ ರಾಜ್ಯದ 15 ಕ್ಷೇತ್ರಗಳಿಗೆ  ಉಪಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

ನವೆಂಬರ್ 16ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: