Asianet Suvarna News Asianet Suvarna News

ಸಿಎಂ ಸಿದ್ದರಾಮಯ್ಯರಿಗೆ ಈಗಲೂ ಬಿಜೆಪಿಯಿಂದ ಜೀವ ಬೆದರಿಕೆಯಿದೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿಯಿಂದ ಈಗಲೂ ಜೀವಬೆದರಿಕೆ ಇರುವುದರಿಂದ ದೂರು ನಿಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್‌ ತಿಳಿಸಿದ್ದಾರೆ.

ಮೈಸೂರು (ಮೇ 25): ಉರಿಗೌಡ, ನಂಜೇಗೌಡ ಟಿಪ್ಪುವನ್ನ ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನ ಹೊಡೆದು ಹಾಕಿ ಎಂದಿದ್ದ ಮಾಜಿ ಸಚಿವ ಅಶ್ವಥ್ ನಾರಾಯಣ್‌‌ ಹೇಳಿದ್ದರು. ಹೀಗಾಗಿ, ಸಿದ್ದರಾಮಯ್ಯ ಅವರಿಗೆ ಬಿಜೆಪಿಯಿಂದ ಈಗಲೂ ಜೀವಬೆದರಿಕೆ ಇರುವುದರಿಂದ ದೂರು ನಿಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನೇರ ಆರೋಪ ಮಾಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯ ಅವಧಿಯಲ್ಲಿ ಉರಿಗೌಡ, ನಂಜೇಗೌಡ ಟಿಪ್ಪುವನ್ನ ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನ ಹೊಡೆದು ಹಾಕಿ ಎಂದಿದ್ದ ಮಾಜಿ ಸಚಿವ ಅಶ್ವಥ್ ನಾರಾಯಣ್‌‌ ಹೇಳಿದ್ದರು. ಅವರ ಹೇಳಿಕೆಯಿಂದ ಈಗಲೂ ಬಿಜೆಪಿಯಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಇದೆ. ಅದೇ ಕಾರಣಕ್ಕೆ ಅಶ್ವಥ್ ನಾರಾಯಣ್ ವಿರುದ್ಧ ನೀಡಿದ್ದ ದೂರಿನ ಕ್ರಮಕ್ಕೆ ಒತ್ತಾಯಿಸುತ್ತಿದೇವೆ ಎಂದರು.

ಸಿಎಂ ಸಿದ್ದರಾಮಯ್ಯ ವಿರುದ್ದ ಕೊಲೆ ಆರೋಪ, ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್ಐಆರ್!

ಈ ಹೇಳಿಕೆ ವಿಡಿಯೋ ಈಗಲೂ ವೈರಲ್ ಆಗುತ್ತಿದೆ. ಇದರಿಂದ ಸಿದ್ದರಾಮಯ್ಯರ ಮೇಲೆ ಮತ್ತೆ ದಾಳಿಯಾಗುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯರಿಗೆ ಏನೇ ಆದರು ಅದಕ್ಕೆ ಬಿಹೆಪಿ, ಅಶ್ವಥ್ ನಾರಾಯಣ್ ಹೊಣೆ‌ಯಾಗಲಿದ್ದಾರೆ.  ಈ ಕೂಡಲೇ ಅಶ್ವಥ್ ನಾರಾಯಣ್‌ರನ್ನ ಪೊಲೀಸರು ಬಂಧಿಸಬೇಕು. ನಾವು ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು ಈ ಬಗ್ಗೆ ಸ್ಪೀಕರ್‌ಗೆ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಹಿಂದೆ ಬಿಜೆಪಿ ವಿರುದ್ಧ ನೀಡಿದ್ದ ದೂರಿನ ಕ್ರಮಕ್ಕೆ ಒತ್ತಾಯಿಸುತ್ತೇವೆ ಎಂದು ಹೇಳಿದರು.

Video Top Stories