ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!

ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಸಂಘರ್ಷ ತಾರಕಕ್ಕೇರಿದೆ. ಅರ್ಧ ಅವಧಿಯ ಅಧಿಕಾರ ಹಂಚಿಕೆ ಒಪ್ಪಂದದ ಹಿನ್ನೆಲೆಯಲ್ಲಿ, ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಹೈಕಮಾಂಡ್ ತೀರ್ಪಿಗಾಗಿ ಕಾಯುತ್ತಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ನ.27): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಸಂಘರ್ಷ ತಾರಕಕ್ಕೇರಿದೆ. 'ಅರ್ಧ ಅವಧಿ' ಅಧಿಕಾರದ ವದಂತಿಗಳು ಇನ್ನು ಕೇವಲ ಊಹಾಪೋಹಗಳಾಗಿ ಉಳಿದಿಲ್ಲ ಎಂಬಂತೆ ಪರಿಸ್ಥಿತಿ ಬದಲಾಗಿದೆ.

ನಮ್ಮಪ್ಪನೇ 5 ವರ್ಷ ಸಿಎಂ, ಅಧಿಕಾರ ಹಂಚಿಕೆ ಸೂತ್ರವೇ ಇಲ್ಲದಿರುವಾಗ ಬದಲಾವಣೆ ಚರ್ಚೆ ಅನಗತ್ಯ; ಯತೀಂದ್ರ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನದಲ್ಲಿ ಅಚಲ ವಿಶ್ವಾಸದಲ್ಲಿದ್ದರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಪಟ್ಟಕ್ಕೇರುವ ಪ್ರಬಲ ಸಂಕಲ್ಪವನ್ನು ಹೊತ್ತುಕೊಂಡು ದೆಹಲಿಯಲ್ಲಿ ಹೈಕಮಾಂಡ್‌ನ ತೀರ್ಪನ್ನು ನಿರೀಕ್ಷಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಇಂದು (ನ.27) ನಡೆಯಲಿರುವ ಮಹತ್ವದ ಸಭೆಯಲ್ಲಿ ಕರ್ನಾಟಕದ ಈ ಸಿಂಹಾಸನ ಸಂಘರ್ಷದ ಭವಿಷ್ಯ ನಿರ್ಧಾರವಾಗುವ ಸಾಧ್ಯತೆ ಇದೆ.

ವರದಿಗಳ ಪ್ರಕಾರ, ಡಿ.ಕೆ. ಸಹೋದರರು ಹೈಕಮಾಂಡ್‌ಗೆ ನಿರ್ಧಾರ ಕೈಗೊಳ್ಳಲು ಒಂದು ವಾರದ ಡೆಡ್‌ಲೈನ್‌ ನೀಡಿದ್ದಾರೆ ಎಂಬ ಮಾತುಗಳು ಹಸ್ತಪಾಳಯದಲ್ಲಿ ಕೇಳಿಬರುತ್ತಿವೆ. ಕಳೆದ ವಿಧಾನಸಭಾ ಚುನಾವಣೆಯ ನಂತರ, ಸಿದ್ದರಾಮಯ್ಯ ಅವರು ಎರಡೂವರೆ ವರ್ಷಗಳ ನಂತರ ಅಧಿಕಾರವನ್ನು ಡಿ.ಕೆ. ಶಿವಕುಮಾರ್ ಅವರಿಗೆ ಬಿಟ್ಟುಕೊಡುತ್ತಾರೆ ಎಂಬ ಮಾತುಗಳು ಬಲವಾಗಿದ್ದವು. ಈಗ ಆ ಅವಧಿ ಮುಕ್ತಾಯಗೊಂಡಿದೆ.

Related Video