'ಹೊರಗಿನಿಂದ ಬಂದವರು... 'ಆರೆಸ್ಸೆಸ್ ಮೂಲ ಕೆದಕಿದ ಸಿದ್ದರಾಮಯ್ಯ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರ್‌ಎಸ್‌ಎಸ್ ಮೂಲ ಕೆದಕಿ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು (ಶುಕ್ರವಾರ) ನಡೆದ ಜವಾಹರಲಾಲ್ ನೆಹರೂ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ಕಿಡಿಕಾರಿದರು.
ಬೆಂಗಳೂರು, (ಮೇ.29): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರ್‌ಎಸ್‌ಎಸ್ ಮೂಲ ಕೆದಕಿ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು (ಶುಕ್ರವಾರ) ನಡೆದ ಜವಾಹರಲಾಲ್ ನೆಹರೂ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ಕಿಡಿಕಾರಿದರು.
ಪಠ್ಯ ಪುಸ್ತಕ ಪರಿಷ್ಕರಣೆ, ದಿನಕ್ಕೊಂದು ತಿರುವು: ಸಿಎಂ ಮಧ್ಯಪ್ರವೇಶಕ್ಕೆ ಸಾಹಿತಿಗಳ ಆಗ್ರಹ!
ಅಪ್ರತಿಮ ದೇಶ ಭಕ್ತ ಭಗತ್ ಸಿಂಗ್ ಪಠ್ಯವನ್ನು ತೆಗೆದು ಹೆಡ್ಗೆವಾರ್ ಭಾಷಣ ಹಾಕಿದ್ದಾರೆ. ಭಗತ್ ಸಿಂಗ್‌ಗಿಂತ ದೇಶ ಭಕ್ತ ಬೇಕಾ? ಇದನ್ನು ಯಾರಾದರೂ ಪ್ರಶ್ನಿಸಿದರೆ ದೇಶ ಬಿಟ್ಟು ಹೋಗಿ ಎನ್ನುತ್ತಾರೆ. ಯಾರು ದೇಶ ಬಿಟ್ಟು ಹೋಗಬೇಕಾದವರು? ಆರ್‌ಎಸ್‌ಎಸ್ ಈ ದೇಶದ್ದಾ..? ಅವರೇನು ದ್ರಾವಿಡರಾ..? ದ್ರಾವಿಡರು ಈ ದೇಶದವರು. ಇದನ್ನೆಲ್ಲಾ ಪ್ರಶ್ನಿಸುತ್ತಾ ಹೋದರೆ ಏನಾಗುತ್ತದೆ ಗೊತ್ತಾ..? ಅದಕ್ಕೆ ಚರಿತ್ರೆಯನ್ನು ಕೆದಕಲು ಹೋಗಬಾರದು. ಈ ಬಗ್ಗೆ ನಾನೂ ಮಾತನಾಡುವುದಿಲ್ಲ ಎಂದರು.