MLAs Vs Ministers: ಶಾಸಕಾಂಗ ಸಭೆಯಲ್ಲೂ ಸಚಿವರ ವಿರುದ್ಧ ದೂರಿನ ಸುರಿಮಳೆ!

ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಶಾಸಕಾಂಗ ಸಭೆಯಲ್ಲಿಯೂ ಸಚಿವರ ವಿರುದ್ಧ ಕಾಂಗ್ರೆಸ್‌ ಶಾಸಕರು ದೂರಿನ ಸುರಿಮಳೆ ಸುರಿಸಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರ ವಿರುದ್ಧವಾಗಿಯೇ ದೂರು ಪತ್ರವನ್ನು ಬರೆದಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಜು.28): ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಶಾಸಕಾಂಗ ಸಭೆಯಲ್ಲಿಯೂ ಸಚಿವರ ವಿರುದ್ಧ ಕಾಂಗ್ರೆಸ್‌ ಶಾಸಕರು ದೂರಿನ ಸುರಿಮಳೆ ಸುರಿಸಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರ ವಿರುದ್ಧವಾಗಿಯೇ ದೂರು ಪತ್ರವನ್ನು ಬರೆದಿದ್ದಾರೆ. ನಮ್ಮನ್ನು ಜಿಲ್ಲಾ ಉಸ್ತುವಾರಿ ಸಚಿವರ ಸಹಾಯಕ ಅಧಿಕಾರಿ, ವಿಶೇಷ ಕರ್ತವ್ಯ ಅಧಿಕಾರಿ ಆಗಿ ನೇಮಕ ಮಾಡಿಬಿಡಿ. ಈ ಸರ್ಕಾರದಲ್ಲಿ ನಮ್ಮ ಮಾತನ್ನು ಯಾರೂ ಕೇಳುತ್ತಿಲ್ಲ. ಆದ್ದರಿಂದ ಸಚಿವರ ಜೊತೆಯಲ್ಲಿದ್ದರೆ ನಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು. ಕೆಲವು ಸಚಿವರು ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಅನುದಾನಗಳನ್ನು ನೀಡುತ್ತಿಲ್ಲ ಎಂದು ಹೊಸದಾಗಿ ಆಯ್ಕೆಯಾದ ಶಾಸಕರೂ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರವನ್ನು ಬರೆದು ಆಕ್ರೋಶವನ್ನು ಹೊರ ಹಾಕಿದ್ದಾರೆ. 

Related Video