
MLC Election Result:ಬೆಳಗಾವಿಯಲ್ಲಿ ಬಿಜೆಪಿಗೆ ಭಾರೀ ಹೊಡೆತ
ತೀವ್ರ ಕುತೂಹಲ ಮೂಡಿಸಿದ್ದ 25 ಸ್ಥಾನಗಳಿಗೆ ನಡೆದಿದ್ದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಇಂದು (ಡಿ.14) ಪ್ರಕರಣವಾಗಿದೆ. ಬಿಜೆಪಿ ಮೇಲುಗೈ ಸಾಧಿಸಿದ್ರೆ, ಕಾಂಗ್ರೆಸ್ ಭಾರೀ ಪೈಪೋಟಿ ನೀಡಿದೆ. ಅದರಲ್ಲೂ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಬೆಳಗಾವಿ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.
ಬೆಂಗಳೂರು, (ಡಿ.14: ತೀವ್ರ ಕುತೂಹಲ ಮೂಡಿಸಿದ್ದ 25 ಸ್ಥಾನಗಳಿಗೆ ನಡೆದಿದ್ದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಇಂದು (ಡಿ.14) ಪ್ರಕರಣವಾಗಿದೆ. ಬಿಜೆಪಿ ಮೇಲುಗೈ ಸಾಧಿಸಿದ್ರೆ, ಕಾಂಗ್ರೆಸ್ ಭಾರೀ ಪೈಪೋಟಿ ನೀಡಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
MLC Election Result: ವಿಧಾನಪರಿಷತ್ ಚುನಾವಣಾ ಫಲಿತಾಂಶದ ಸಂಪೂರ್ಣ ಚಿತ್ರಣ ಇಲ್ಲಿದೆ
ಅದರಲ್ಲೂ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಬೆಳಗಾವಿ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಸ್ವಪಕ್ಷದ ಶಾಸಕ ರಮೇಶ್ ಜಾರಕಿಹೊಳಿ ಅವರ ತಂತ್ರಗಾರಿಕೆ ಉಲ್ಟಾ ಹೊಡೆದಿದ್ದರಿಂದ ಅಧಕೃತ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಸೋಲುಕಂಡಿದ್ದಾರೆ. ಈ ಫಲಿತಾಂಶ ಬಿಜೆಪಿ ನಾಯಕರಿಗೆ ಅಚ್ಚರಿ ಉಂಟುಮಾಡಿದೆ.