Karnataka Election 2023: ಮತದಾನ ಮಾಡಿ ಆಟೋ ಓಡಿಸಿದ ಡಿ.ಕೆ.ಶಿವಕುಮಾರ್‌

ಕೆಪಿಸಿಸಿ ಅಧ್ಯಕ್ಷ, ಕನಕಪುರ ಕಾಂಗ್ರೆಸ್ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಶಿವಕುಮಾರ್‌ ಬುಧವಾರ ಮತದಾನದ ಬಳಿಕ ಕ್ಷೇತ್ರದಲ್ಲಿ ಸುತ್ತಾಟ ನಡೆಸಿದ್ದು, ಕೋಡಿಹಳ್ಳಿಯಲ್ಲಿ ಆಟೋ ಚಲಾಯಿಸಿ ಗಮನ ಸೆಳೆದರು. 

First Published May 10, 2023, 4:19 PM IST | Last Updated May 10, 2023, 4:19 PM IST

ರಾಮನಗರ (ಮೇ.10): ಕೆಪಿಸಿಸಿ ಅಧ್ಯಕ್ಷ, ಕನಕಪುರ ಕಾಂಗ್ರೆಸ್ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಶಿವಕುಮಾರ್‌ ಬುಧವಾರ ಮತದಾನದ ಬಳಿಕ ಕ್ಷೇತ್ರದಲ್ಲಿ ಸುತ್ತಾಟ ನಡೆಸಿದ್ದು, ಕೋಡಿಹಳ್ಳಿಯಲ್ಲಿ ಆಟೋ ಚಲಾಯಿಸಿ ಗಮನ ಸೆಳೆದರು. ಆಟೋ ಓಡಿಸುವ ಸಂದರ್ಭದಲ್ಲಿ ಮಹಿಳಾ ಮತದಾರರೊಬ್ಬರು ಅವರ ಪಕ್ಕದಲ್ಲಿ ಕುಳಿತಿದ್ದು ವಿಶೇಷವಾಗಿತ್ತು. ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತದಾನಕ್ಕೂ ಮುನ್ನ ದಿನವಾದ ಮಂಗಳವಾರ ಮಧ್ಯಾಹ್ನ ನಾಡದೇವತೆ ಚಾಮುಂಡೇಶ್ವರಿಗೆ ಒಟ್ಟಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಚಾಮುಂಡಿಬೆಟ್ಟಕ್ಕೆ ಒಟ್ಟಿಗೆ ಆಗಮಿಸಿದ ಇಬ್ಬರು ನಾಯಕರು ದೇವಸ್ಥಾನದ ಎದುರು ಕೈ ಕೈ ಹಿಡಿದು ಒಗ್ಗಟ್ಟು ಪ್ರದರ್ಶಿಸಿದರು ಹಾಗೂ ಒಟ್ಟಿಗೆ ಈಡುಗಾಯಿ ಹೊಡೆಯುವ ಮೂಲಕ ದೇವರಿಗೆ ಹರಕೆ ಸಲ್ಲಿಸಿದರು. ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿದ ಡಿ.ಕೆ. ಶಿವಕುಮಾರ್‌ ಅವರು ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಬಳಿಕ ಇಬ್ಬರು ಚಾಮುಂಡಿಬೆಟ್ಟಕ್ಕೆ ತೆರಳಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಇಂದು (ಮೇ.10) ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.

Video Top Stories