Asianet Suvarna News Asianet Suvarna News

Karnataka Election 2023: ಬಿಜೆಪಿಗೆ ಬಹುಮತ ಬರುತ್ತದೆಂಬ ನಂಬಿಕೆ ಇದೆ: ಸಿಎಂ ಬೊಮ್ಮಾಯಿ

ಕರ್ನಾಟಕ ವಿಧಾನಸಭಾ ಚುನಾವಣಾ ಮತದಾನ ಪೂರ್ಣಗೊಂಡಿದ್ದು, ನಾಳೆ (ಮೇ.12) ಫಲಿತಾಂಶ ಹೊರ ಬೀಳಲಿದೆ. ಫಲಿತಾಂಶಕ್ಕೂ ಮುನ್ನ ಬಿಜೆಪಿಗೆ ಬಹುಮತ ಬರುತ್ತದೆ ಎಂದು ನಂಬಿಕೆ ಇದೆ. ಈ ಬಗ್ಗೆ ಎಲ್ಲ ಜಿಲ್ಲೆಗಳಲ್ಲಿ ಹಾಗೂ ಕ್ಷೇತ್ರಗಳಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 
 

ಬೆಂಗಳೂರು (ಮೇ.12): ಕರ್ನಾಟಕ ವಿಧಾನಸಭಾ ಚುನಾವಣಾ ಮತದಾನ ಪೂರ್ಣಗೊಂಡಿದ್ದು, ನಾಳೆ (ಮೇ.12) ಫಲಿತಾಂಶ ಹೊರ ಬೀಳಲಿದೆ. ಫಲಿತಾಂಶಕ್ಕೂ ಮುನ್ನ ಬಿಜೆಪಿಗೆ ಬಹುಮತ ಬರುತ್ತದೆ ಎಂದು ನಂಬಿಕೆ ಇದೆ. ಈ ಬಗ್ಗೆ ಎಲ್ಲ ಜಿಲ್ಲೆಗಳಲ್ಲಿ ಹಾಗೂ ಕ್ಷೇತ್ರಗಳಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕೆಲವು ಜಿಲ್ಲೆಗಳಲಂತೂ  ಗ್ರೌಂಡ್ ರಿಪೋರ್ಟ್‌ನ್ನು ಬೂತ್‌ ವೈಸ್ ತಗೊಂಡಿದ್ದೇವೆ. ನಮಗೆ ಸಂಪೂರ್ಣ ವಿಶ್ವಾಸವಿದ್ದು, ನಾವು ಮ್ಯಾಜಿಕ್‌ ನಂಬರ್‌ ಅನ್ನ ಪಡೆಯುತ್ತೇವೆ ಎಂದರು. 

ಇನ್ನು ಕಾಂಗ್ರೆಸ್‌ಗೆ ಸಂಪೂರ್ಣ ಮೆಜಾರಿಟಿ ಬರಲ್ಲ ಜೊತೆಗೆ ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ ಹಾಗಾಗಿ ಅವರು ರೆಸಾರ್ಟ್ ರಾಜಕೀಯವನ್ನು ಮಾಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. 16ನೇ ವಿಧಾನಸಭಾ ಚುನಾವಣೆಯು ಮೇ 10ರಂದು ಒಂದೇ ಹಂತದಲ್ಲಿ ನಡೆದಿತ್ತು. ರಾಜ್ಯದ ಎಲ್ಲೆಡೆ ಸ್ಥಾಪನೆಯಾದ 58,545 ಮತಗಟ್ಟೆಗಳಲ್ಲಿ 2615 ಅಭ್ಯರ್ಥಿಗಳ ಭವಿಷ್ಯವನ್ನು 3.8 ಕೋಟಿ ಮತದಾರರು ಬರೆದಿದ್ದು, ಒಟ್ಟಾರೆ ದಾಖಲೆಯುತ ಶೇ.73.19ರಷ್ಟು ಮತದಾನವಾಗಿತ್ತು. 224 ಅಭ್ಯರ್ಥಿಗಳು ರಾಜ್ಯ ವಿಧಾನಸಭೆಗೆ ಆಯ್ಕೆಯಾಗಲಿದ್ದು, ಸರಕಾರ ರಚಿಸಲು ಪಕ್ಷವೊಂದಕ್ಕೆ 113 ಬಲಾಬಲ ಪ್ರದರ್ಶಿಸಬೇಕು.

Video Top Stories