ರಾಜ್ಯದಲ್ಲಿ ಕ್ವಿಕ್ ರಾಜಕೀಯ, ಮತ್ತೆ ಶುರುವಾಯ್ತು ರೆಸಾರ್ಟ್ ಪಾಲಿಟಿಕ್ಸ್‌..!

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಎಕ್ಸಿಟ್‌ ಪೋಲ್‌ ಸಮೀಕ್ಷೆಗಳು ರಾಜಕೀಯ ಪಕ್ಷಗಳನ್ನ ನಿದ್ದೆಗೆಡಿಸಿದ್ದು. ತಂತ್ರ ಪ್ರತಿತಂತ್ರಗಳಿಗೆ ಮೇ 13 ರಂದು ಉತ್ತರ ಸಿಗಲಿದೆ.   ಕೆಲವು ಸಮೀಕ್ಷೆಗಳು, ಅತಂತ್ರ ಫಲಿತಾಂಶವನ್ನು ತೋರಿಸಿವೆ.ಅತಂತ್ರ ವಿಧಾನಸಭೆ ರಚನೆಯಾದರೆ ಶಾಸಕರುಗಳನ್ನು ಹಿಡಿದಿಟ್ಟುಕೊಳ್ಳುವುದು ರಾಜಕೀಯ ಪಕ್ಷಗಳಿಗೆ ಸವಾಲಾಗಲಿದೆ. 

Share this Video
  • FB
  • Linkdin
  • Whatsapp

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಎಕ್ಸಿಟ್‌ ಪೋಲ್‌ ಸಮೀಕ್ಷೆಗಳು ರಾಜಕೀಯ ಪಕ್ಷಗಳನ್ನ ನಿದ್ದೆಗೆಡಿಸಿದ್ದು. ತಂತ್ರ ಪ್ರತಿತಂತ್ರಗಳಿಗೆ ಮೇ 13 ರಂದು ಉತ್ತರ ಸಿಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಅಧಿಕಾರಕ್ಕೆ ಬರಲಿದ್ದು. ಕೆಲವು ಸಮೀಕ್ಷೆಗಳು, ಅತಂತ್ರ ಫಲಿತಾಂಶವನ್ನು ತೋರಿಸಿವೆ.ಅತಂತ್ರ ವಿಧಾನಸಭೆ ರಚನೆಯಾದರೆ ಶಾಸಕರುಗಳನ್ನು ಹಿಡಿದಿಟ್ಟುಕೊಳ್ಳುವುದು ರಾಜಕೀಯ ಪಕ್ಷಗಳಿಗೆ ಸವಾಲಾಗಲಿದೆ. ಆಪರೇಷನ್ ಕಮಲ, ಆಪರೇಷನ್ ಹಸ್ತಕ್ಕೆ ಜೆಡಿಎಸ್‌ನಿಂದ ಶಾಸಕರನ್ನು ಸೆಳೆಯುವ ಪ್ರಯತ್ನಗಳು ನಡೆಯುವ ಸಾಧ್ಯತೆಗಳು ಇರುವುದರಿಂದ ಜೆಡಿಎಸ್ ಶಾಸಕರ ಒಗ್ಗಟ್ಟನ್ನು ಕಾಪಾಡುವುದು ಸವಾಲಾಗಲಿದೆ. ಹಾಗಾಗಿ, ಫಲಿತಾಂಶ ಹೊರಬಿದ್ದು, ಅತಂತ್ರ ವಿಧಾನಸಭೆ ಸೃಷ್ಟಿಯಾದರೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಶಾಸಕರನ್ನು ಕಾಪಾಡಿಕೊಳ್ಳಲು ರೆಸಾರ್ಟ್ ರಾಜಕೀಯಕ್ಕೆ ಮೊರೆ ಹೋಗುವ ಸಾಧ್ಯತೆಗಳಿವೆ. ಹಾಗಾಗಿ, ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ಗಳು ಈ ಚುನಾವಣೆಯಲ್ಲಿ ಬಹುತೇಕ ಗೆಲ್ಲುವ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಈಗಾಗಲೇ ಸಂಪರ್ಕಿಸಿ ಅವರನ್ನು ಹಿಡಿದಿಟ್ಟುಕೊಳ್ಳುವ ತಂತ್ರಗಳನ್ನು ರೂಪಿಸಿವೆ.

Related Video