ದೆಹಲಿಯಿಂದ ಮರಳಿದ ಶೆಟ್ಟರ್,ಮೂರನೇ ಪಟ್ಟಿಯಲ್ಲಿ ಹೆಸರು ಸೇರಿಸಲು ನಡ್ಡಾ ವಿಶ್ವಾಸ..!
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ 23 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ದೆಹಲಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ದೌಡಾಯಿಸಿದ್ದರು
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ 23 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ದೆಹಲಿಗೆ ದೌಡಾಯಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಬ್ಬಳ್ಳಿಗೆ ವಾಪಸ್ಸಾಗಿದ್ದಾರೆ. ಹುಬ್ಬಳ್ಳಿಗೆ ವಾಪಸ್ಸಾ ಆದ ಬಳಿಕ ಮಾತನಾಡಿದ ಅವರು ಅಧ್ಯಕ್ಷ ಜೆ. ಪಿ. ನಡ್ಡಾ ಜೊತೆ ಸುದೀರ್ಘ ಚರ್ಚೆ ನಡೆಸಿದ್ದೇನೆ., ಮೂರನೇ ಪಟ್ಟಿಯಲ್ಲಿ ಖಂಡಿತಾ ನನ್ನ ಹೆಸರು ಸೇರಿರುತ್ತೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಬೆಂಗಳೂರಿನಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದೇನೆ. ಅವರೂ ಸಹ ಹೈಕಮಾಂಡ್ ಜೊತೆ ಮಾತನಾಡಿರುವುದಾಗಿ ಹೇಳಿದ್ದಾರೆ. ಸಕಾರಾತ್ಮಕವಾಗಿ ಸ್ಪಂದನೆ ಸಿಕ್ಕಿದೆ ಎಂದು ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.