ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಶಕ್ತಿ ಪ್ರದರ್ಶನ, ವರುಣಾದಲ್ಲಿ ಸಿದ್ದು ಅದ್ದೂರಿ ಕಾರ್ಯಕ್ರಮ!
ಸಿಎಂ ಬೊಮ್ಮಾಯಿ 2 ಕಿ.ಮೀ ರೋಡ್ ಶೋ, ನಡ್ಡಾ, ಸುದೀಪ್ ಸೇರಿ ಹಲವು ಭಾಗಿ,ನಾಮಪತ್ರ ಸಲ್ಲಿಕೆಗೂ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್, ನಾಳೆ ಹಾಸನದಲ್ಲಿ ಜೆಡಿಎಸ್ ಅದ್ದೂರಿ ರೋಡ್ ಶೋ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ಹೈಲೈಟ್ಸ್ ಇಲ್ಲಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ವೇಳೆ 2 ಕಿ.ಮೀ ರೋಡ್ ಶೋ ನಡೆಸಿದ್ದಾರೆ. ಅಪಾರ ಬೆಂಬಲಿಗರು, ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಯಾಗಿತ್ತು. ಕಾರಣ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ನಟ ಕಿಚ್ಚ ಸುದೀಪ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.ಸಿಎಂ ಬೊಮ್ಮಾಯಿ ಕಾಮ್ ಕೇ ವಾಸ್ತೆ ಸಿಎಂ. ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಕರ್ನಾಟಕದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ. ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸುದೀಪ್, ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹೆಮ್ಮೆ ಇದೆ ಎಂದಿದ್ದಾರೆ.ವರುಣಾ ಕ್ಷೇತ್ರದಿಂದ ಇಂದು ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದಕ್ಕೂ ಮೊದಲು ಎರಡು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಅದ್ಧೂರಿ ರೋಡ್ ಶೋ ಮೂಲಕ ಸಿದ್ದರಾಮಯ್ಯ ಸಮಾವೇಶಕ್ಕೆ ಆಗಮಿಸಿದರು. ಬಿಜೆಪಿ ಜೆಡಿಎಸ್ ಒಳಒಪ್ಪಂದ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.