NewsHour ಕಿತ್ತೂರು ಕರ್ನಾಟಕದಲ್ಲಿ ರಾಹುಲ್ ಅಬ್ಬರ, ಲಿಂಗಾಯತ ಮತಬೇಟೆ!

ಲಿಂಗಾಯಿತ ಮತ ಸೆಳೆಯಲು ಕಾಂಗ್ರೆಸ್ ಮುಂದಾಗಿದೆ. ರಾಹುಲ್ ಗಾಂಧಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ ಕ್ಷೇತ್ರಗಳನ್ನೇ ಟಾರ್ಗೆಟ್ ಮಾಡಿರುವ ಕಾಂಗ್ರೆಸ್ ಇದೀಗ ಬೆಳಗಾವಿಗೆ ಆಗಮಿಸಿದ್ದಾರೆ.

Share this Video
  • FB
  • Linkdin
  • Whatsapp

ಕಳೆದ 2 ದಿನದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕದಲ್ಲಿದ್ದಾರೆ. ಲಿಂಗಾಯಿತರ ಮತ ಸೆಳೆಯಲು ಬಸವಜಯಂತಿ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಪಾಲ್ಗೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ 40 ಪರ್ಸೆಂಟ್ ಕಮಿಷನ್ ಸರ್ಕಾರ. ಹೀಗಾಗಿ ಕಾಂಗ್ರೆಸ್ ಸರ್ಕಾರವನ್ನು 150 ಸ್ಥಾನಗಳಲ್ಲಿ ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ. ಕಾಂಗ್ರೆಸ್ ನಾಯಕರೊಂದಿಗೆ ಮಹತ್ವದ ಸಭೆ ನಡೆಸಿದ ರಾಹುಲ್ ಗಾಂಧಿ, ಕಿತ್ತೂರು ಕರ್ನಾಟಕ ಗೆಲ್ಲಲು ನಾಯಕರಿಗೆ ಟಾಸ್ಕ್ ನೀಡಿದ್ದಾರೆ.

Related Video