karnataka election ಕಾಂಗ್ರೆಸ್ ಪ್ರಣಾಳಿಕೆಗೂ ನಮಗೂ ಸಂಬಂಧವಿಲ್ಲ:ಎಚ್ ಡಿ ದೇವೇಗೌಡ
ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪ್ರತಿಕ್ರಿಯೆಗೆ ನಿರಾಕರಿಸಿದ ಹೆಚ್‌ಡಿ ದೇವೇಗೌಡ, ಜೆಡಿಎಸ್ ಪ್ರಣಾಳಿಕೆಯ ಎಲ್ಲಾ ಭರವಸೆ ಈಡೇರಿಸುತ್ತಾರೆ ಎಂದಿದ್ದಾರೆ. ಈ ಕುರಿತು ಹೆಚ್‌ಡಿ ದೇವೇಗೌಡ ನೀಡಿದ ಪ್ರತಿಕ್ರಿಯೆ ಇಲ್ಲಿದೆ.
ಬೆಂಗಳೂರು(ಮೇ.02): ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆವನ್ನು ಈಡೇರಿಸುತ್ತೇವೆ. ಕೊಟ್ಟಿರುವ ಮಾತು ಉಳಿಸಿಕೊಳ್ಳುವ ಏಕೈಕ ವ್ಯಕ್ತಿ ಹೆಚ್‌ಡಿ ಕುಮಾರಸ್ವಾಮಿ. ರಾಜ್ಯದ ಜನತೆ ಮತ ನೀಡಿದರೆ ಎಲ್ಲಾ ಭರವಸೆ ಈಡೇರಿಸುತ್ತೇವೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ದೇವೇಗೌಡ, ಜೆಡಿಎಸ್ ಜನರ ಬೇಡಿಕೆಗೆ ತಕ್ಕಂತೆ ಸ್ಪಂದಿಸಿದೆ ಎಂದಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಅವರ ಪ್ರಣಾಳಿಕೆಗೂ ನಮಗೂ ಸಂಬಂಧವಿಲ್ಲ ಎಂದಿದ್ದಾರೆ.