ಪ್ರಧಾನಿ ನರೇಂದ್ರ ಮೋದಿಗೆ 'ನಾಲಾಯಕ್ 'ಎಂದ ಪ್ರಿಯಾಂಕ್ ಖರ್ಗೆ...!

ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಶಾಸಕ ಪ್ರಿಯಾಂಕ್‌ ಖರ್ಗೆ ಪರೋಕ್ಷವಾಗಿ ನಾಲಾಯಕ್‌ ಎಂದು ಹೇಳಿದ್ದಾರೆ. 

First Published May 1, 2023, 12:31 PM IST | Last Updated May 1, 2023, 12:34 PM IST

ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಶಾಸಕ ಪ್ರಿಯಾಂಕ್‌ ಖರ್ಗೆ ಪರೋಕ್ಷವಾಗಿ ನಾಲಾಯಕ್‌ ಎಂದು ಹೇಳಿದ್ದಾರೆ. ಮಾಧ್ಯಮದ ಜತೆ ಮಾತನಾಡಿರುವ ಅವರು ಮೋದಿ ಸೇಡಂ ಮಳಖೇಡಕ್ಕೆ ಬಂದಾಗ ಬಂಜಾರಾ ಸಮಾಜದವರಿಗೆ ಏನು ಹೇಳಿದ್ರು? ಬಂಜಾರಾ ಸಮಾಜದ ಜನರ ಮಗ ದೆಹಲಿಯಲ್ಲಿದ್ದಾನೆ ಅಂತ ಮೋದಿ ಹೇಳಿದ್ದರು. ಆದ್ರೆ ಇಂತಹ ನಾಲಾಯಕ್ ಮಗನಿದ್ರೆ ಹೇಗೆ ನಡೆಯುತ್ತೆ? ದೇಶ ನಡೆಸೋನು ಮಾತ್ರವಲ್ಲ. ಮನೆಯಲ್ಲಿ ಒಬ್ಬ ನಾಲಾಯಕ್ ಮಗನಿದ್ರೂ ಮನೆ ಸುಸೂತ್ರವಾಗಿ ನಡೆಯೋದಿಲ್ಲ ಎಂದು ಹೇಳಿದರು. 91 ಬಾರಿ‌ ಕಾಂಗ್ರೆಸ್ ನಿಂದಿಸಿದ ಬಗ್ಗೆ ಮಾತನಾಡುವುದಕ್ಕೆ ಸಮಯವಿದೆ. ಆದರೆ ಗುತ್ತಿಗೆದಾರರ ಸಂಘ, ಸಂತೋಷ್‌ ಪಾಟೀಲ್ ಆತ್ಮಹತ್ಯೆ ಪ್ರಕರಣ, ಗೂಳಿಹಟ್ಟಿ ಶೇಖರ್ ಅವರ ಪತ್ರದ ಬಗ್ಗೆ ಉತ್ತರ ಕೊಟ್ಟಿಲ್ಲ ಎಂದು ಆರೋಪಿಸಿದರು.


 

Video Top Stories