ಸಚಿವ ಸಂಪುಟದಲ್ಲಿ ಲಿಂಗಾಯತರಿಗೆ ಹೆಚ್ಚು ಸ್ಥಾನ ಕೊಡಿ: ರಂಭಾಪುರಿ ಶ್ರೀಗಳ ಆಗ್ರಹ

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬಹುಮತ ಗಳಿಸಲು ನೆರವಾಗಿರುವ ಲಿಂಗಾಯತ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಹೆಚ್ಚಿನ ಸ್ಥಾನ ನೀಡುವಂತೆ ರಂಭಾಪುರಿ ಸ್ವಾಮೀಜಿ ಒತ್ತಾಯಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಮೇ 15): ರಾಜ್ಯದಲ್ಲಿ ಕಾಂಗ್ರೆಸ್‌ ಬಹುಮತವನ್ನು ಗಳಿಸಿದ್ದು, ಇದರಲ್ಲಿ ಲಿಂಗಾಯತರ ಕೊಡುಗೆ ಹೆಚ್ಚಿನದ್ದಾಗಿದೆ. ಡಿ.ಕೆ. ಶಿವಕುಮಾರ್‌ ಅವರು ಧರ್ಮದ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ್ದು, ಅದರಂತೆ ಸಚಿವ ಸಂಪುಟದಲ್ಲಿ ಲಿಂಗಾಯತರಿಗೆ ಹೆಚ್ಚಿನ ಸ್ಥಾನಗಳನ್ನು ನೀಡಬೇಕು ಎಂದು ರಂಭಾಪುರಿ ಶ್ರೀಗಳು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಧರ್ಮದ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ್ದ ಡಿ.ಕೆ. ಶಿವಕುಮಾರ್‌ ಅವರ ಹೇಳಿಕೆಗೆ ಕಾರ್ಯಕ್ರಮದಲ್ಲಿ ಹಾಜರಿದ್ದ ಸಿದ್ದರಾಮಯ್ಯ ಕೂಡ ವಿಷಾದ ವ್ಯಕ್ತಪಡಿಸಿದ್ದರು. ಅಖಿಲ ಮಹಾಸಭಾ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರು ನಾನು ಲಿಂಗಾಯತ ಸಮುದಾದಿಂದ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ಸ್ಥಾನದಲ್ಲಿದ್ದೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ ಲಿಂಗಾಯತರಿಗೆ ಸಿಎಂ ಸ್ಥಾನ ಕೊಡುವ ಬಗ್ಗೆ ನಿರ್ಧಾರ ಕೈಗೊಂಡರೆ ಶಾಮನೂರು ಶಿವಶಂಕರಪ್ಪ ಅಥವಾ ಎಂ.ಬಿ. ಪಾಟೀಲ್‌ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಒಂದು ವೇಳೆ ಸಿಎಂ ಸ್ಥಾನ ಕೊಡದಿದ್ದರೆ ಲಿಂಗಾಯತರಿಗೆ ಸಚಿವ ಸಂಪುಟದಲ್ಲಿ ಹೆಚ್ಚಿನ ಸ್ಥಾನಗಳನ್ನು ನಿಡಬೇಕು ಎಂದು ಒತ್ತಾಯಿಸಿದ್ದಾರೆ.

Related Video