Karnataka Election Result 2023 ಗೆಲುವಿನ ಬೆನ್ನಲ್ಲೇ ಡಿಕೆಶಿ ಭಾವುಕ, ಜೈಲು ದಿನ ನೆನೆದು ಕಣ್ಣೀರು!

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನೊಂದಿಗೆ ಸರ್ಕಾರ ರಚಿಸಲು ಸಜ್ಜಾಗಿದೆ. ಗೆಲುವಿನ ಕುರಿತು ಪ್ರತಿಕ್ರಿಯೆ ನೀಡಿದ ಅಧ್ಯಕ್ಷ ಡಿಕೆ ಶಿವಕುಮಾರ್ ಭಾವುಕರಾಗಿದ್ದಾರೆ. ಜನರ ಆಶೀರ್ವಾದ ಕಂಡು ಡಿಕೆ ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಮೇ.13): ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತದಾರರ ಕಾಂಗ್ರೆಸ್ ಹೈ ಹಿಡಿದ್ದಾರೆ. ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದೆ. ಇದೀಗ ಸರ್ಕಾರ ರಚನೆ ಮಾತುಕತೆಗಳು ನಡೆಯುತ್ತಿದೆ. ಕಾಂಗ್ರೆಸ್ ಗೆಲುವಿನ ಕುರಿತು ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಭಾವುಕರಾಗಿದ್ದಾರೆ. ಈ ಗೆಲುವನ್ನು ಪಶ್ರದ ಕಾರ್ಯಕರ್ತರು, ಕೇಂದ್ರ ನಾಯಕರು ಹಾಗೂ ರಾಜ್ಯ ನಾಯಕರಿಗೆ ನೀಡಲು ಬಯಸುತ್ತೇನೆ. ಜನರು ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟು ಮತ ನೀಡಿದ್ದಾರೆ. ಒಗ್ಗಟ್ಟಿನಿಂದ ಕಾಂಗ್ರೆಸ್ ಈ ಬಾರಿಯ ಚುನಾವಣಯಲ್ಲಿ ಸ್ಪರ್ಧಿಸಿತ್ತು. ಇದೇ ವೇಳೆ ಜೈಲಿನಲ್ಲಿದ್ದ ದಿನಗಳನ್ನು ನೆನೆದು ಡಿಕೆ ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ.

Related Video