ಅಧಿಕಾರಕ್ಕಾಗಿ ಕಾಂಗ್ರೆಸ್‌ ಕರ್ನಾಟಕದ ಹೆಮ್ಮೆ, ಪರಂಪರೆ, ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ: ಕುಮಾರಸ್ವಾಮಿ ಕಿಡಿ

ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್‌ ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. 
 

Share this Video
  • FB
  • Linkdin
  • Whatsapp

ಮಹಾಘಟಬಂಧನ್‌ ಸಭೆ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಮತ್ತೆ ಕಿಡಿ ಕಾರಿದ್ದಾರೆ. ನಾಯಕರ ಸ್ವಾಗತಕ್ಕೆ ಐಎಎಸ್‌ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. 30 ಐಎಎಸ್‌ ಅಧಿಕಾರಿಗಳನ್ನು ದ್ವಾರಪಾಲಕರಾಗಿ ನೇಮಿಸಲಾಗಿದೆ ಎಂದು ಆರೋಪಿಸಿದ್ದಾರೆ. ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ, ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್‌ ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಪ್ರಶ್ನೆ ಮಾಡಿದ್ದಾರೆ. 

Related Video