ಲೋಕಸಭಾ ಚುನಾವಣೆ ಮೇಲೆ ಮಾಜಿಗಳ ಕಣ್ಣು: ಬಿಜೆಪಿ ಟಿಕೆಟ್‌ಗೆ ಭಾರಿ ಲಾಭಿ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಹಲವು ಮಾಜಿ ಸಚಿವರು ಮತ್ತು ಮಾಜಿ ಶಾಸಕರು ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಜು.14): ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಹಲವು ಮಾಜಿ ಸಚಿವರು ಮತ್ತು ಮಾಜಿ ಶಾಸಕರು ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಗೆ ಒಂದು ವರ್ಷ ಬಾಕಿಯಿರುವ ಮುನ್ನವೇ ತಾವು ಕೂಡ ಪ್ರಭಲ ಆಕಾಂಕ್ಷಿ ಎಂಬ ಲೆಕ್ಕಾಚಾರವನ್ನು ಆಯಾ ಪಕ್ಷಗಳ ಹೈಕಮಾಂಡ್‌ ಮುಂದೆ ಇಡಲು ಪ್ರಯತ್ನ ಮಾಡುತ್ತಿದ್ದಾರೆ.

ಅದರಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಾಜಿ ಸಚಿವರು, ಮಾಜಿ ಶಾಸಕರು ಈಗಾಗಲೇ ಟಿಕೆಟ್ಗಾಗು ಭಾರಿ ಪೈಪೋಟಿಯನ್ನು ಆರಂಭಿಸಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಚಿಕೆಟ್‌ಗಾಗಿ ಸಿ.ಟಿ.ರವಿ ಮತ್ತು ಡಿ.ಎನ್. ಜೀವರಾಜ್‌ ಟಿಕೆಟ್‌ಗೆ ಲಾಬಿ ಮಾಡುತ್ತಿದ್ದಾರೆ. ಇನ್ನು ಈ ಕ್ಷೇತ್ರದಿಂದ ಆಯ್ಲೆಯಾಗಿ ಕೇಂದ್ರ ಸಚಿವೆ ಆಗಿರುವ ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರಿನಿಂದ ಕಣಕ್ಕಿಳಿಸಲು ಚಿಂತನೆ ಮಾಡಲಾಗಿದೆ. ಬಳ್ಳಾರಿಯಲ್ಲಿ ಶ್ರೀರಾಮುಲು ಸ್ಪರ್ಧೆಗೆ ಇಳಿಯಲಿದ್ದಾರೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ವಿ. ಸೋಮಣ್ಣ, ಜೆಸಿ. ಮಾಧುಸ್ವಾಮಿ ಹಾಗೂ ಮಸಾಲೆ ಜಯರಾಂ ಅವರ ನಡುವೆ ಪೈಪೋಟೊ ಏರ್ಪಟ್ಟಿದೆ. 

Related Video