ಜವಾಬ್ದಾರಿಯುತ ಸ್ಪೀಕರ್ ಸ್ಥಾನಕ್ಕೆ ನಾನು ಅರ್ಹನಲ್ಲ ಎನ್ನುತ್ತಲೇ ಸಚಿವ ಸ್ಥಾನಕ್ಕೆ ಕರ್ಚೀಫ್ ಹಾಕಿದ ಆರ್‌ವಿ
ನನಗೆ ಸ್ಪೀಕರ್ ಆಗುವ ಸರ್ಹತೆ ಇಲ್ಲ ಎಂದು ಸ್ವತಃ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಹೇಳಿಕೊಂಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಮಂತ್ರಿ ಸ್ಥಾನದ ಆಕಾಂಕ್ಷಿ ಎಂಬಂತೆ ಮಾತನಾಡಿದ್ದಾರೆ.
ಬೆಂಗಳೂರು (ಮೇ.19): ರಾಜ್ಯದ 2023ರ ಹೊಸ ಕಾಂಗ್ರೆಸ್ ಸರ್ಕಾರದಲ್ಲಿ ನನಗೆ ಸ್ಪೀಕರ್ (ವಿಧಾನಸಭಾ ಅಧ್ಯಕ್ಷ) ಆಗುವ ಸರ್ಹತೆ ಇಲ್ಲವೆಂದು ಅನಿಸುತ್ತದೆ ಎಂದು ಸ್ವತಃ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಹೇಳಿಕೊಂಡಿದ್ದಾರೆ.
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದ್ದು, ಪ್ರಮಾಣವಚನ ಸ್ವೀಕಾರ ಮಾತ್ರ ಬಾಕಿಯಿದೆ. ಆದರೆ, ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಲಾಗುತ್ತದೆ ಎಂಬುದಕ್ಕೆ ಯಾರ ಬಳಿಯೂ ಸ್ಪಷ್ಟ ಉತ್ತರಗಳಿಲ್ಲ. ಸಚಿವ ಸಂಪುಟದಲ್ಲಿ ನಾನು ಇರುವ ಬಗ್ಗೆ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ರಾಜ್ಯದ ಸಚಿವ ಸಂಪುಟದಿಂದ ಹಿರಿಯರನ್ನು ಕೈ ಬಿಡುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.