ಕರ್ನಾಟಕ ಲೋಕಾಯುಕ್ತಕ್ಕೆ ಫುಲ್ ಪವರ್, ಹೈಕೋರ್ಟ್ ಆದೇಶಕ್ಕೆ ಸಿದ್ದು ಪಂಚರ್!
ಸಿದ್ದರಾಮಯ್ಯ ಸರ್ಕಾರ ಹುಟ್ಟು ಹಾಕಿದ್ದ ಎಸಿಬಿ ಸಂಸ್ಥೆ ಕಳೆದ 6 ವರ್ಷದಲ್ಲಿ ಸರಿಸುಮಾರು 200 ಕೋಟಿ ರೂಪಾಯಿಗೂ ಹೆಚ್ಚು ಹಣ ಖರ್ಚು ಮಾಡಿದೆ. ಆದರೆ ಶಿಕ್ಷೆಯಾಗಿರುವುದು ಕೇವಲ 4 ಜನರಿಗೆ ಮಾತ್ರ. ಅದೂ ಕೂಡ ಕೆಳಹಂತದ ಸಿಬ್ಬಂದಿಗಳಿಗೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಲೋಕಾಯುಕ್ತ ಸಂಸ್ಥೆಯ ಅಧಿಕಾರ ಕಿತ್ತುಕೊಂಡು ಎಸಿಬಿ ಸಂಸ್ಥೆಯನ್ನು ಹುಟ್ಟು ಹಾಕಿದ್ದರು. ಈ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಎಸಿಬಿ ಮುಚ್ಚಿ ಲೋಕಾಯುಕ್ತಕ್ಕೆ ಫುಲ್ ಪವರ್ ನೀಡಲು ಹೈಕೋರ್ಟ್ ಆದೇಶ ನೀಡಿದೆ. ಲೋಕಾಯುಕ್ತ ಸಂಸ್ಥೆಯನ್ನು ಅಂದಿನ ಸಿಎಂ ಸಿದ್ದರಾಮಯ್ಯ ಕತ್ತು ಹಿಸುಕಿದ್ದು ಹೇಗೆ? ಇದರ ಬದಲು ಸರ್ಕಾರದ ಕೈಗೊಂಬೆಯಾಗಿ ವರ್ತಿಸುವ ಎಸಿಬಿಯನ್ನು ಹುಟ್ಟು ಹಾಕಿದ್ದರು. ಆದರೆ ಹೈಕೋರ್ಟ್ ತೀರ್ಪು ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯಗೆ ತೀವ್ರ ಮುಖಭಂಗ ತಂದಿದೆ.