Asianet Suvarna News Asianet Suvarna News

ಟಗರು Vs ಬಂಡೆ: ಕೈ ಟಿಕೆಟ್ ಫೈಟ್‌ನಲ್ಲಿ ಗೆದ್ದಿದ್ಯಾರು..?

 ಜೂ.14 ರಂದು ಖಾಲಿಯಾಗುವ ವಿಧಾನ ಪರಿಷತ್  (Vidhana parishat) ಏಳು ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಹೆಚ್ಚುವರಿ ನಾಮಪತ್ರಗಳು ಸಲ್ಲಿಕೆಯಾಗದೆ, ಏಳು ಸ್ಥಾನಕ್ಕೆ ಏಳು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. 

ಬೆಂಗಳೂರು (ಮೇ. 25):  ಜೂ.14 ರಂದು ಖಾಲಿಯಾಗುವ ವಿಧಾನ ಪರಿಷತ್  (Vidhana parishat) ಏಳು ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಹೆಚ್ಚುವರಿ ನಾಮಪತ್ರಗಳು ಸಲ್ಲಿಕೆಯಾಗದೆ, ಏಳು ಸ್ಥಾನಕ್ಕೆ ಏಳು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. 

ಚುನಾವಣೆ ನಡೆಯುವ ಏಳು ಸ್ಥಾನದಲ್ಲಿ ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಆಡಳಿತಾರೂಢ ಬಿಜೆಪಿಗೆ ನಾಲ್ಕು, ಪ್ರತಿಪಕ್ಷ ಕಾಂಗ್ರೆಸ್‌ಗೆ ಎರಡು ಮತ್ತು ಜೆಡಿಎಸ್‌ಗೆ ಒಂದು ಸ್ಥಾನ ಲಭಿಸಲಿದೆ. ಆಡಳಿತಾರೂಢ ಬಿಜೆಪಿ, ಅಂತಿಮವಾಗಿ ಒಬ್ಬರು ಹಳಬರು ಮತ್ತು ಮೂವರು ಹೊಸ ಮುಖಗಳಿಗೆ ಅವಕಾಶ ಕಲ್ಪಿಸಿದೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ರಾಜ್ಯ ಎಸ್‌ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಎಸ್‌.ಕೇಶವಪ್ರಸಾದ್‌ ಹಾಗೂ ಹೇಮಲತಾ ನಾಯಕ್‌ ಅವರನ್ನು ಅಧಿಕೃತ ಅಭ್ಯರ್ಥಿಗಳನ್ನಾಗಿ ಘೋಷಿಸಿತು.

ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಪಕ್ಷದ ವಕ್ತಾರ ಎಂ.ನಾಗರಾಜ್‌ ಮತ್ತು ಮೇಲ್ಮನೆ ಮಾಜಿ ಸದಸ್ಯ ಅಬ್ದುಲ್‌ ಜಬ್ಬಾರ್‌ ನಾಮಪತ್ರ ಸಲ್ಲಿಸಿದರು. ಜೆಡಿಎಸ್‌ ಅಭ್ಯರ್ಥಿಯಾಗಿ ಪಕ್ಷ ವಕ್ತಾರ ಟಿ.ಎ.ಶರವಣ ನಾಮಪತ್ರ ಸಲ್ಲಿಸಿದರು. 
 

Video Top Stories