ನೂತನ ಶಾಸಕರಿಂದ ಮತ್ತೊಂದು ದಿಟ್ಟ ನಿರ್ಧಾರ; ಬಿಜೆಪಿ ನಾಯಕರಿಗೆ ಖಡಕ್ ಸಂದೇಶ
ಕಾಂಗ್ರೆಸ್, ಜೆಡಿಎಸ್ ತ್ಯಜಿಸಿ ಅನರ್ಹರಾಗಿ, ಮತ್ತೆ ಉಪಚುನಾವಣೆಯಲ್ಲಿ ಗೆದ್ದು ಬಂದ ಶಾಸಕರು ಈಗ ಮತ್ತೊಂದು ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಮುಂಬರುವ ವಿಧಾನಸಭಾ ಕಲಾಪಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ.
ಬೆಂಗಳೂರು (ಡಿ.31): ಕಾಂಗ್ರೆಸ್, ಜೆಡಿಎಸ್ ತ್ಯಜಿಸಿ ಅನರ್ಹರಾಗಿ, ಮತ್ತೆ ಉಪಚುನಾವಣೆಯಲ್ಲಿ ಗೆದ್ದು ಬಂದ ಶಾಸಕರು ಈಗ ಮತ್ತೊಂದು ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಮುಂಬರುವ ವಿಧಾನಸಭಾ ಕಲಾಪಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸೂಕ್ತವಾದ ಸ್ಥಾನಮಾನ, ಅನುದಾನ ಸಿಗದ ಕಾರಣ ನೀಡಿ 17 ಶಾಸಕರು ರಾಜೀನಾಮೆ ನೀಡಿ ಹೊರಬಂದಿದ್ದರು. ಈ ಶಾಸಕರು ಅನರ್ಹತೆಗೆ ಗುರಿಯಾದರೆ, ಮೈತ್ರಿ ಸರ್ಕಾರ ಪತನವಾಗಿತ್ತು.
ಇದನ್ನೂ ನೋಡಿ: ವಿಜಯನಗರ ಜಿಲ್ಲೆ ಘೋಷಣೆಗೆ ಆನಂದ್ ಸಿಂಗ್ ಡೆಡ್‌ಲೈನ್? ಬಿಜೆಪಿಗೆ ಮತ್ತೆ ಟೆನ್ಶನ್...
ಶಾಸಕರ ರಾಜೀನಾಮೆಯಿಂದ ತೆರವಾದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಡಿ.05ರಂದು ಉಪಚುನಾವಣೆಗಳು ನಡೆದಿದ್ದು, ಡಿ.09ಕ್ಕೆ ಫಲಿತಾಂಶ ಪ್ರಕಟವಾಗಿತ್ತು. ಅನರ್ಹ ಶಾಸಕರು ಬಿಜೆಪಿಯಿಂದ ಸ್ಪರ್ಧಿಸಿದ್ದು 11 ಮಂದಿ ಮತ್ತೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.