News Hour: ಕಾಂಗ್ರೆಸ್ ಕುದುರೆ ಕಟ್ಟಿಹಾಕಲು ಮೈತ್ರಿ ಹಗ್ಗ ಹಿಡಿದು ಬಂದ ಬಿಜೆಪಿ-ಜೆಡಿಎಸ್
ರಾಜ್ಯದಲ್ಲಿ ಕಾಂಗ್ರೆಸ್‌ನ ಗೆಲುವಿನ ಕುದುರೆಯನ್ನು ಕಟ್ಟಿಹಾಕುವ ಸಲುವಾಗಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಹಗ್ಗ ಹಿಡಿದುಕೊಂಡು ಬಂದಿವೆ. ಮುಂದಿನ ಲೋಕಸಭೆ ಚುನಾವಣೆಗೆ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದು ಖಚಿತವಾಗಿದೆ.
ಬೆಂಗಳೂರು (ಸೆ.8): ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್ ಪಕ್ಷದ ಗೆಲುವಿನ ಕುದುರೆಯನ್ನು ಕಟ್ಟಿಹಾಕುವ ನಿಟ್ಟಿನಲ್ಲಿ ರಾಜ್ಯ ರಾಜಕಾರಣದಲ್ಲಿ ಮೈತ್ರಿ ಹಗ್ಗ ಸಿದ್ಧವಾಗಿದೆ. ಕೈ ಪಾಳಯದ ವಿರುದ್ಧ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದೆ.
ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಫೈನಲ್ ಆಗಿದೆ. ಈ ಮೈತ್ರಿಯಿಂದ ಖುಷಿ ಪಟ್ಟವರು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ. ಮೈಸೂರಿನಲ್ಲಿ ಪ್ರತಾಪ್ ಸಿಂಹರನ್ನು ಸೋಲಿಸುವಂತೆ ಸ್ವತಃ ಸಿದ್ಧರಾಮಯ್ಯ ಅವರೇ ಕರೆ ನೀಡಿದ್ದರು.
ಇನ್ನು ನಾನು ಮನೆಯಲ್ಲಿ ಕೂರಲ್ಲ, 3-4 ದಿನಗಳಲ್ಲಿ ರಾಜ್ಯ ಪ್ರವಾಸ: ಬಿಎಸ್‌ವೈ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ನಿಟ್ಟಿನಲ್ಲಿ ಕೇಸರಿ ಪಡೆ ಜೆಡಿಎಸ್‌ನ ಕೈ ಹಿಡಿದಿದೆ. ಅದರೊಂದಿಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ 28 ಸ್ಥಾನಗಳ ಮೇಲೂ ಬಿಜೆಪಿ ಕಣ್ಣಿಟ್ಟಿದೆ. ಇದೇ ವಿಚಾರವಾಗಿ ದೇವೇಗೌಡರು ದೆಹಲಿಗೆ ಹೋಗಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದರು.