ಸಂಪುಟ ಸರ್ಕಸ್‌ಗೆ ತೆರೆ, ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್, ಯಾರಿಗೆ ಒಲಿಯಲಿದೆ ಮಂತ್ರಿಗಿರಿ.?
ಗೃಹ ಸಚಿವ ಅಮಿತ್ ಶಾ, ಹಾಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ದೆಹಲಿಯಲ್ಲಿ ಸುದೀರ್ಘ ಮಾತುಕತೆ ನಡೆಸಿದ ಯಡಿಯೂರಪ್ಪ ಅವರು ಅಂತಿಮವಾಗಿ ಸಂಪುಟ ವಿಸ್ತರಣೆಗೆ ಅನುಮತಿ ಪಡೆಯುವಲ್ಲಿ ಸಫಲರಾದಂತಾಗಿದೆ.
ಬೆಂಗಳೂರು (ಜ. 11): ಕೊನೆಗೂ ಸಂಪುಟ ಸರ್ಕಸ್‌ಗೆ ತೆರೆ ಬಿದ್ದಿದ್ದು, ಸಂಕ್ರಾಂತಿಗೂ ಮುನ್ನ ಅಂದರೆ ಜ. 13 ಕ್ಕೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅಸ್ತು ಎಂದಿದೆ. ಗೃಹ ಸಚಿವ ಅಮಿತ್ ಶಾ, ಹಾಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ದೆಹಲಿಯಲ್ಲಿ ಸುದೀರ್ಘ ಮಾತುಕತೆ ನಡೆಸಿದ ಯಡಿಯೂರಪ್ಪ ಅವರು ಅಂತಿಮವಾಗಿ ಸಂಪುಟ ವಿಸ್ತರಣೆಗೆ ಅನುಮತಿ ಪಡೆಯುವಲ್ಲಿ ಸಫಲರಾದಂತಾಗಿದೆ.
ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್, 7 ಶಾಸಕರಿಗೆ ಸಚಿವ ಸ್ಥಾನ, ಯಾರ ಹೆಸರು ಅಂತಿಮ..?
ಶೀಘ್ರದಲ್ಲೇ ಒಂದು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗುವ ನಿರೀಕ್ಷೆ ಇರುವುದರಿಂದ ಸಂಪುಟ ವಿಸ್ತರಣೆಗೆ ವಿಳಂಬ ಮಾಡಬಾರದು ಎಂದು ಯಡಿಯೂರಪ್ಪ ಅವರು ಮನವೊಲಿಸಿದ್ದಾರೆ ಎಂದು ಹೇಳಲಾಗಿದೆ.