Asianet Suvarna News Asianet Suvarna News

ಅಪ್ಪನ ಅಖಾಡವೋ, ಹೊಸ ರಣರಂಗವೋ..? ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ರಣತಂತ್ರ..!

Sep 19, 2021, 5:17 PM IST

ಬೆಂಗಳೂರು (ಸೆ. 19): ವಿಜಯೇಂದ್ರ ಸದ್ಯಕ್ಕೆ ಯಾವುದೇ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅವರು ಮುಂದಿನ ದಿನಗಳಲ್ಲಿ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎನ್ನುವುದು ನಿರ್ಧಾರವಾಗಿಲ್ಲ. ವಿಜಯೇಂದ್ರ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತಿದ್ದಾರೆ. ಅವರು ಎಲ್ಲಿಂದ ಸ್ಪರ್ಧೆ ಮಾಡಬೇಕು ಎಂದು ಹೈಕಮಾಂಡ್‌ ತೀರ್ಮಾನಿಸುತ್ತದೆ ಎಂದು ಬಿಎಸ್‌ವೈ ಹೇಳಿರುವುದು ರಾಜಕೀಯ ಸಂಚಲನ ಉಂಟು ಮಾಡಿದೆ. 

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಬಿಎಸ್‌ವೈ ಹೇಳಿಕೆ

ನಾನು ಯಾವಾಗ ಸ್ಪರ್ಧೆ ಮಾಡಬೇಕು, ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.  ಹಾಗಾದರೆ ಬಿಜೆಪಿ ರಣತಂತ್ರವೇನು..?