
ರಾಜ್ಯಸಭಾ ಫೈಟ್: ಬಿಜೆಪಿಗೆ 2, ಕಾಂಗ್ರೆಸ್ 1 ಜಯ, 4 ನೇ ಸ್ಥಾನಕ್ಕೆ ಹಣಾಹಣಿ
ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ ಮತದಾನ ಶುಕ್ರವಾರ ನಡೆಯಲಿದ್ದು, ನಾಲ್ಕನೆಯ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.
ಬೆಂಗಳೂರು (ಜೂ. 10): ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ (Rajyasabha Election) ಮತದಾನ ಇಂದು ನಡೆಯಲಿದ್ದು, ನಾಲ್ಕನೆಯ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.
News Hour ರಾಜ್ಯಸಭಾ ಚುನಾವಣೆಗಾಗಿ ಹಳೇಯದು ಮರೆಯೋಣ ಎಂದರು, ಮರೆತಿಲ್ಲ ಯಾರೊಬ್ಬರು!
ಒಟ್ಟು ನಾಲ್ಕು ಸ್ಥಾನಗಳ ಪೈಕಿ ಮೊದಲ ಮೂರು ಸ್ಥಾನಗಳ ಗೆಲುವು ಬಹುತೇಕ ನಿಶ್ಚಿತವಾಗಿವೆ. ಆದರೆ, ನಾಲ್ಕನೇ ಸ್ಥಾನಕ್ಕಾಗಿ ಮೂರೂ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಪೈಪೋಟಿ ನಡೆಸಿರುವುದರಿಂದ ಯಾರು ಗೆಲುವು ಸಾಧಿಸಲಿದ್ದಾರೆ ಎಂಬುದಕ್ಕೆ ಇಂದಿನ ಸಂಜೆವರೆಗೆ ಕಾಯಬೇಕಾಗಿದೆ.
ಬಿಜೆಪಿಗೆ ಎರಡು ಮತ್ತು ಕಾಂಗ್ರೆಸ್‌ಗೆ ಒಂದು ಸ್ಥಾನ ಖಚಿತವಾಗಿವೆ. ಬಿಜೆಪಿಯ ನಿರ್ಮಲಾ ಸೀತಾರಾಮನ್ (Nirmala Sitharaman) ಜಗ್ಗೇಶ್ (Jaggesh) ಹಾಗೂ ಕಾಂಗ್ರೆಸ್‌ನ ಜೈರಾಂ ರಮೇಶ್ ಅವರ ಗೆಲುವು ಹೆಚ್ಚೂ ಕಡಮೆ ನಿರ್ಧಾರವಾಗಿದೆ. ನಾಲ್ಕನೇ ಸ್ಥಾನಕ್ಕಾಗಿ ಬಿಜೆಪಿಯಿಂದ ಲೆಹರ್ ಸಿಂಗ್ ಸಿರೋಯ, ಕಾಂಗ್ರೆಸ್‌ನಿಂದ ಮನ್ಸೂರ್ ಅಲಿ ಖಾನ್ ಹಾಗೂ ಜೆಡಿಎಸ್‌ನಿಂದ ಕುಪೇಂದ್ರ ರೆಡ್ಡಿ ಸ್ಪರ್ಧಿಸಿದ್ದಾರೆ.