ಮೀಸಲಾತಿ ಹೋರಾಟ, ಮುಸ್ಲಿಂ ನಾಯಕನಿಂದ ಬೊಮ್ಮಾಯಿ ವಿರುದ್ಧ ಅವಹೇಳನಕಾರಿ ಹೇಳಿಕೆ!

ರಾಜ್ಯದಲ್ಲಿ ಮೀಸಲಾತಿ ಹೋರಾಟ, ಬೋವಿ, ಬಂಜಾರ ಸಮುದಾಯದ ಹಾಗೂ ಮುಸ್ಲಿಮ್ ಸಮುದಾಯದ ಪ್ರತಿಭಟನೆ , ಉತ್ತರ ಪ್ರದೇಶ ಗ್ಯಾಂಗ್‌ಸ್ಟರ್ ಅತೀಖ್ ಅಹಮ್ಮದ್‌ಗೆ ಜೀವಾವದಿ ಶಿಕ್ಷೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

ಮೀಸಲಾತಿ ಕಿಚ್ಚು ರಾಜ್ಯಾದ್ಯಂತ ಹಬ್ಬುತ್ತಿದೆ. ಪ್ರತಿಭಟನೆ ಜೋರಾಗುತ್ತಿದೆ. ಬಂಜಾರ, ಬೋವಿ ಸಮುದಾಯದ ಪ್ರತಿಭಟನೆ ಜೊತೆಗೆ ಮುಸ್ಲಿಮ್ ಸಮುದಾಯ ಕೂಡ ಪ್ರತಿಭಟನೆ ನಡೆಸುತ್ತಿದೆ. ಇದರ ನಡುವೆ ಎಸ್‌ಡಿಪಿ ನೇತೃತ್ವದಲ್ಲಿ ಮುಸ್ಲಿಮ್ ಸಮುದಾಯ ಹೋರಾಟ ನಡೆಸುತ್ತಿದೆ. ಚಿತ್ರದುರ್ಗ ಎಸ್‌ಡಿಪಿಐ ಕಾರ್ಯದರ್ಶಿ ಜಾಕೀರ್ ಹುಸೈನ್, ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಇದಕ್ಕೆ ಬೊಮ್ಮಾಯಿ ಖಡಕ್ ತಿರುಗೇಟು ನೀಡಿದ್ದಾರೆ. ಇತ್ತ ಮೀಸಲಾತಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಬಿಎಸ್ ಯಡಿಯೂರಪ್ಪ ಮನೆ ಮೇಲೆ ದಾಳಿ ನಡೆಸದ ಮೂವರನ್ನು ಬಂಧಿಸಲಾಗಿದೆ. ಈ ಮೂವರ ಕಾಂಗ್ರೆಸ್ ನಾಯಕರ ಜೊತೆ ಗುರುತಿಸಿಗೊಂಡಿದ್ದಾರೆ. ರಾಜ್ಯದಲ್ಲಿ ಮೀಸಲಾತಿ ಹೋರಾಟ ತೀವ್ರಗೊಳ್ಳುತ್ತಿದ್ದು, ಚುನಾವಣೆ ಹೊಸ್ತಿಲಲ್ಲಿ, ಕಾಂಗ್ರೆಸ್, ಜೆಡಿಎಸ್ ಅಸ್ತ್ರವಾಗಿ ಬಳಸಿಕೊಂಡರೆ, ಬಿಜೆಪಿ ಪ್ರತ್ಯಾಸ್ತ್ರ ಸಿದ್ದಪಡಿಸಿದೆ.

Related Video