ಗುರಿ ತಲುಪುವ ಮೊದಲೇ ಘಟ್ಟ ಸೇರಿತಾ ಮೀಸಲಾತಿ ಹೋರಾಟ.?

ಸಂಪುಟ ಸಭೆಯಲ್ಲಿ  ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅನೌಪಚಾರಿಕವಾಗಿ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಮೀಸಲಾತಿಗಾಗಿ ಒತ್ತಾಯ, ಹೋರಾಟಗಳಿಂದ ಸರ್ಕಾರಕ್ಕೆ ಎದುರಾಗುತ್ತಿರುವ ಸಂದಿಗ್ಧತೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. 

First Published Feb 19, 2021, 5:00 PM IST | Last Updated Feb 19, 2021, 6:08 PM IST

ಬೆಂಗಳೂರು (ಫೆ. 19): ಸಂಪುಟ ಸಭೆಯಲ್ಲಿ  ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅನೌಪಚಾರಿಕವಾಗಿ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಮೀಸಲಾತಿಗಾಗಿ ಒತ್ತಾಯ, ಹೋರಾಟಗಳಿಂದ ಸರ್ಕಾರಕ್ಕೆ ಎದುರಾಗುತ್ತಿರುವ ಸಂದಿಗ್ಧತೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. 

ನಿರ್ದಿಷ್ಟ ಪ್ರದೇಶಗಳಲ್ಲೇ ಕೊರೊನಾ ಹೆಚ್ಚಾಗುತ್ತಿರುವುದೇಕೆ.?

ಈ ವಿಚಾರದಲ್ಲಿ ಸರ್ಕಾರ ಆತುರದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಸಂವಿಧಾನಬದ್ಧವಾಗಿ ಕಾನೂನು ಚೌಕಟ್ಟಿನಲ್ಲೇ ಯಾವುದೇ ಸಮುದಾಯಕ್ಕೆ ಮೀಸಲಾತಿ ನೀಡಿಕೆ, ಪ್ರಮಾಣ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಕೇಂದ್ರ ಸರ್ಕಾರದೊಂದಿಗೂ ಈ ಬಗ್ಗೆ ಚರ್ಚಿಸಬೇಕಾಗುತ್ತದೆ. ಹಾಗಾಗಿ ಈ ವಿಚಾರವಾಗಿ ಯಾವುದೇ ಸಚಿವರು ಬಹಿರಂಗವಾಗಿ ಗೊಂದಲಕಾರಿ ಹೇಳಿಕೆಗಳನ್ನು ನೀಡಬಾರದು. ಸಾಧ್ಯವಾದಷ್ಟುತಮ್ಮ ತಮ್ಮ ಸಮುದಾಯದ ಮಠಾಧೀಶರೊಂದಿಗೆ ಸಚಿವರು ಸಮಾಲೋಚನೆ ನಡೆಸಿ ಪರಿಸ್ಥಿತಿ ಮನವರಿಕೆ ಮಾಡಿಕೊಡಿ ಎಂದು ಸಲಹೆ ನೀಡಿದ್ದಾರೆ.