Asianet Suvarna News Asianet Suvarna News

ಸಿದ್ದರಾಮಯ್ಯ ಸಿಎಂ ಕುರ್ಚಿಗೆ ಉರುಳು ತರಲಿದ್ಯಾ ಯತೀಂದ್ರನ ಮಾತು? ಅಸಲಿ ಭಾಷಣ ಇಲ್ಲಿದೆ ನೋಡಿ!

ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಯಂತೀಂದ್ರ ಭಾಷಣದ ಅಸಲಿ ವಿಡಿಯೋ ಇಲ್ಲಿದೆ ನೋಡಿ..

ಬೆಂಗಳೂರು (ಸೆ.20): ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ ಅವರು ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಅವರ ಪುತ್ರ ಡಾ. ಯತೀಂದ್ರ ಅವರು ನೀಡಿರುವ ಹೇಳಿಕೆ ನೀಡಿದ್ದಾರೆ.

ನಂಜನಗೂಡು ತಾಲೂಕು ಮಡಿವಾಳ ಸಮುದಾಯದ ಭವನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ಅವರು, 'ಮಡಿವಾಳ ಸಮುದಾಯದ ಮತದಾರರಿಗೆ ಚುನಾವಣೆ ವೇಳೆ ಕುಕ್ಕರ್‌, ಐರನ್‌ ಬಾಕ್ಸ್‌ ಕೊಟ್ಟಿದ್ದರು. ಮಡಿವಾಳ ಸಮುದಾಯದ ಮತದಾತರರಿಗೆ ಮಡಿವಾಳದ ಸಮುದಾಯದ ರಾಜ್ಯಾಧ್ಯಕ್ಷ ನಂಜಪ್ಪ ಕುಕ್ಕರ್‌, ಐರನ್‌ ಬಾಕ್ಸ್‌ ಕೊಡಲು ಸಿದ್ಧತೆ ಮಾಡಿಕೊಂಡಿದ್ದರು. ಕಾರಣಾಂತರಗಳಿಂದ ಎರಡು ಮೂರು ಬಾರಿ ಮುಂದೂಡಿಕೆ ಮಾಡಲಾಗಿತ್ತು. ನಂತರ ತಂದೆಯವರ ದಿನಾಂಕವನ್ನು ಪಡೆದು ತಂದೆಯವರ ಕೈಯಿಂದಲೇ ಕುಕ್ಕರ್‌ ಮತ್ತು ಐರನ್‌ ಬಾಕ್ಸ್‌ ಕೊಡಿಸಿದರು. ಈ ಮೂಲಕ ಮಡಿವಾಳ ಸಮುದಾಯದ ಹೆಚ್ಚು ಮತ ಬೀಳಲು ಕಾರಣವಾಯಿತು. ಮಡಿವಾಳ ಸಮುದಾಯ ಹೆಚ್ಚಿನ ಮತ ಕೊಟ್ಟಿದ್ದಕ್ಕೆ ನಿಮಗೆ ಧನ್ಯವಾದ' ಎಂದು ಹೇಳಿದ್ದರು.

ಅಸಲಿ ಹಸ್ತದ ಹಕೀಕತ್ತು ನೋಡಿ, 135 ಕಾಂಗ್ರೆಸ್‌ ಶಾಸಕರನ್ನು ಅನರ್ಹಗೊಳಿಸಿ: ಎಚ್‌ಡಿಕೆ ಮನವಿ

ಇನ್ನು ಸಿದ್ದರಾಮಯ್ಯ ಅವರು ಅಕ್ರಮವಾಗಿ ಜಯಗಳಿಸಿದ್ದು, ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಮಾಜಿ ಶಾಸಕ ಕೆ.ಎಸ್. ಈಶ್ವರಪ್ಪ ಆಗ್ರಹ ಮಾಡಿದ್ದಾರೆ. ನಂತರ, ವರುಣಾದಲ್ಲಿ ಹೇಳಿಕೆ ನೀಡಿರುವ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾದ ಪ್ರತಿಪಕ್ಷ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಇನ್ನು ಮತ್ತೊಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಕುಕ್ಕರ್‌, ಇಸ್ತ್ರಿಪೆಟ್ಟಿಗೆ ಹಾಗೂ ತವಾ ಹಂಚಿಕೊಂಡು ಗೆಲುವು ಸಾಧಿಸಿದ್ದಾರೆ. ಕೂಡಲೇ ಚುನಾವಣಾ ಆಯೋಗವು ತನಿಖೆ ಮಾಡಿ ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

Video Top Stories