Asianet Suvarna News Asianet Suvarna News

ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ: ಕಾಂಗ್ರೆಸ್‌ ಸೇರುವುದಾಗಿ ಬಹಿರಂಗವಾಗಿ ಘೋಷಿಸಿದ ಶಾಸಕ

Sep 18, 2021, 3:51 PM IST

ಕೋಲಾರ, (ಸೆ.18): ಒಂದು ಕಡೆ ವಿಧಾನಸಭೆ ಅಧಿವೇಶನ ನಡೆಯುತ್ತಿದೆ. ಮತ್ತೊಂದೆಡೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ. 

ಹೌದು...ಈಗಾಗಲೇ ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಕಾಂಗ್ರೆಸ್ ಸೇರುವುದು ಖಚಿತವಾಗಿದ್ದು, ಇದರ ಬೆನ್ನಲ್ಲೇ ಮತ್ತೋರ್ವ ಶಾಸಕ ಜೆಡಿಎಸ್‌ ತೊರೆದು ಕಾಂಗ್ರೆಸ್ ಸೇರುವುದು ಅಧಿಕೃತವಾಗಿದೆ. 

ದೇವೇಗೌಡ್ರು ಕ್ರಮಕ್ಕೆ ಸೂಚಿಸಿದ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಜೆಡಿಎಸ್ ಶಾಸಕ

ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಅವರು ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದೆ. ಈ ಬಗ್ಗೆ ಅವರೇ ಇಂದು (ಸೆ.18) ಮಾಧ್ಯಮಗಳ ಮುಂದೆ ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ.