ರಾಹುಲ್ ಗಾಂಧಿ ಅಂಗಳ ತಲುಪಿದ ಕೋಲಾರ ಟಿಕೆಟ್ ಲಾಬಿ: ಸಿದ್ದು ವಿರುದ್ಧ ಬಂಡಾಯ
ಕಾಂಗ್ರೆಸ್‌ನಿಂದ 2ನೇ ಪಟ್ಟಿ ಬಿಡುಗಡೆ ಆದರೂ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡಲು ಬಯಸಿದ್ದ ಕೋಲಾರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಈವರೆಗೂ ಘೋಷಣೆ ಮಾಡಿಲ್ಲ.
ಕೋಲಾರ (ಏ.06): ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ 2ನೇ ಪಟ್ಟಿ ಬಿಡುಗಡೆ ಆದರೂ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡಲು ಬಯಸಿದ್ದ ಕೋಲಾರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಈವರೆಗೂ ಘೋಷಣೆ ಮಾಡಿಲ್ಲ.
ಇನ್ನು ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್ ಘೋಷಣೆ ಮಾಡಲಾಗಿದೆ. ಆದರೆ, ಈಗ ಕೋಲಾರದಿಂದಲೂ ಸಿದ್ದರಾಮಯ್ಯ ಅವರಿಗೆ ಟಿಕೆಟ್ ನೀಡಿದರೆ ತಮಗೂ ಕೂಡ 2 ವಿಧಾನಸಭಾ ಕ್ಷೇತ್ರಗಳನ್ನು ಕೊಡುವಂತೆ ಡಾ.ಜಿ. ಪರಮೇಶ್ವರ ಅವರೂ ಕೂಡ ಆಗ್ರಹ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಲಾರ ಕ್ಷೇತ್ರವನ್ನು ಸಿದ್ದರಾಮಯ್ಯ ಸ್ಪರ್ಧೆಗೆ ಕೊಡಬೇಕಾ ಬೇಡವಾ ಎನ್ನುವುದು ಇನ್ನೂ ಸಿಇಸಿ ಸಭೆಯಲ್ಲಿ ಚರ್ಚಿತ ವಿಷಯವಾಗಿಯೇ ಉಳಿದಿದೆ.
ಇನ್ನು ಕಾಂಗ್ರೆಸ್ ಹೈಕಮಾಂಡ್‌ನಿಂದ ಸಿದ್ದರಾಮಯ್ಯಗೆ ನೀವು ಶೇ.1 ಪರ್ಸೆಂಟ್ ಕೂಡ ರಿಸ್ಕ್ ತೆಗೆದುಕೊಳ್ಳಬೇಡಿ. ನಾಮಪತ್ರ ಸಲ್ಲಿಕೆ ಮಾಡಿದ ನಂತರ ಕ್ಷಣದಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಸೂಚನೆ ನೀಡಿದೆ. ಜೊತೆಗೆ, ಈಗಾಗಲೇ ವರುಣಾ ಕ್ಷೇತ್ರ ಸಿದ್ದರಾಮಯ್ಯ ಅವರಿಗೆ ಗೆಲುವು ಸ್ಪಷ್ಟ ಇರುವಾಗ ಮತ್ತೆ ಯಾಕೆ 2 ಕ್ಷೇತ್ರಗಳನ್ನು ಕೊಡಬೇಕು ಎಂದು ರಾಜ್ಯ ನಾಯಕರು ಪ್ರಶ್ನೆ ಮಾಡಿದ್ದಾರೆ. ಆದರೆ, ಈಗ ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆಯಿಂದ ಸುತ್ತಲಿನ 15ಕ್ಕೂ ಅಧಿಕ ಕ್ಷೇತ್ರಗಳ ಅಭ್ಯರ್ಥಿಗಳು ಗೆಲ್ಲಲು ಅನುಕೂಲ ಆಗಲಿದೆ ಎಂಬ ಮಾತು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ 2ನೇ ಟಿಕೆಟ್ ನೀಡುವ ಬಗ್ಗೆ ಸ್ವತಃ ರಾಹುಲ್ ಗಾಂಧಿ ವಿವೇಚನೆಗೆ ಬಿಡಲಾಗಿದೆ ಎಂದು ತಿಳಿದುಬಂದಿದೆ.