ಬಸ್ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಟ್ವಿಸ್ಟ್‌: ವರ್ಗಾವಣೆಗೆ ಬೇಸತ್ರಾ ಜಗದೀಶ್‌..?

ಕೆಎಸ್ಆರ್‌ಟಿಸಿ ಬಸ್ ಚಾಲಕ ಜಗದೀಶ್‌ ಆತ್ಮಹತ್ಯೆ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದಿದೆ.

Share this Video
  • FB
  • Linkdin
  • Whatsapp

ಕೆಎಸ್ಆರ್‌ಟಿಸಿ (KSRTC) ಬಸ್‌ ಚಾಲಕನ ಆತ್ಮಹತ್ಯೆ ಯತ್ನ ಪ್ರಕರಣ ರಾಜಕೀಯ ತಿರುವು ಪಡೆದಿದೆ. ನಾಗಮಂಗಲ ಕೆಎಸ್‌ಆರ್‌ಟಿಸಿ ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸಿದ ಚಾಲಕ ಜಗದೀಶ್‌ (Jagadish) ಸ್ಥಿತಿ ಚಿಂತಾಜನಕವಾಗಿದೆ. ಇದೀಗ ಈ ಪ್ರಕರಣ ರಾಜಕೀಯ ತಿರುವು ಪಡೆದಿದೆ. ಅಲ್ಲದೇ ಜಗದೀಶ್‌ನನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಇವರು ವರ್ಗಾವಣೆಗೆ ಬೇಸತ್ತು ವಿಷವನ್ನು ಸೇವಿಸಿದ್ದರು. ನಾಗಮಂಗಲದ ಕೆಎಸ್‌ಆರ್‌ಟಿಸಿ ಚಾಲಕರಾಗಿದ್ದರು. ಚಲುವರಾಯಸ್ವಾಮಿ ಸೂಚನೆ ಮೇರೆಗೆ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಜಗದೀಶ್‌ ಅವರ ತಂದೆ ಜೆಡಿಎಸ್‌ಗೆ ಬೆಂಬಲ ನೀಡಿದ ಹಿನ್ನೆಲೆ ಈ ವರ್ಗಾವಣೆ ಮಾಡಲಾಗಿದೆ ಎನ್ನಲಾಗ್ತಿದೆ. ಆಸ್ಪತ್ರೆಗೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ (HD Kumaraswamy) ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ: ಪವಾರ್ VS ಪವಾರ್.. ಠಾಕ್ರೆ VS ಠಾಕ್ರೆ ಯುದ್ಧ..!: ಎಲ್ಲೆಲ್ಲಿ..ಹೇಗೆಲ್ಲಾ..ಕುಟುಂಬಗಳನ್ನೇ ಒಡೆದು ಹಾಕಿದೆ ರಾಜಕಾರಣ?

Related Video